canaratvnews

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್‌ರವರು ಭೇಟಿ

ಮಂಗಳೂರು. ಆ10 : ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್‌ರವರು ಭೇಟಿ ನೀಡಿ ದೇವರ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು.

. ಈ ಸಂದರ್ಭ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ದ.ಕ. ಜಿಲ್ಲಾ ಕಾಂಗ್ರೆಸ್ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದೇವಳ ಅಭಿವೃದ್ಧಿ ಸಮಿತಿ ಸದಸ್ಯ ಜಯರಾಮ್ ಕಾರಂದೂರು, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪ್ರಮುಖರಾದ ಯೋಗೀಶ್ ಮುಲ್ಕಿ, ವಿಜಯ ಕುಮಾರ್ ಸೊರಕೆ, ರಾಜೇಂದ್ರ ಚಿಲಿಂಬಿ ಮತ್ತಿತರರು ಉಪಸ್ಥಿತರಿದ್ದರು.

Share News
Exit mobile version