canaratvnews

ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ಸ್ಥಗಿತಗೊಳಿಸಿದ ಸೌದಿ ಅರೇಬಿಯಾ

ರಿಯಾದ್: ಸೌದಿ ಅರೇಬಿಯಾವು ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಹಜ್ ಯಾತ್ರೆ ಹಿನ್ನೆಲೆ ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸೌದಿ ಸರ್ಕಾರ ತಿಳಿಸಿದೆ. ಈ ನಿಷೇಧವು ಹಜ್ ಯಾತ್ರೆಯು ಮುಕ್ತಾಯಗೊಳ್ಳುವವರೆಗೆ ಅಂದರೆ ಜೂನ್ ಮಧ್ಯದವರೆಗೆ ನಿಷೇಧವು ಜಾರಿಯಲ್ಲಿರಲಿದೆ.

ಸೌದಿ ಅರೇಬಿಯಾ ಉಮ್ರಾ, ವ್ಯಾಪಾರ ಮತ್ತು ಕೌಟುಂಬಿಕ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನೋಂದಣಿ ಇಲ್ಲದ ವ್ಯಕ್ತಿಗಳು ಹಜ್ ನಿರ್ವಹಿಸಲು ಪ್ರಯತ್ನಿಸುವುದನ್ನು ತಡೆಯಲು, ಜನಸಂದಣಿಯನ್ನು ನಿಯಂತ್ರಿಸಲು, ಹಜ್ ವೇಳೆ ಕಾಲ್ತುಳಿತದಂತಹ ಘಟನೆಯನ್ನು ತಪ್ಪಿಸಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸೌದಿ ಅಧಿಕಾರಿಗಳು ಹೇಳಿದರು.

Share News
Exit mobile version