• Home  
  • SCDCC ಬ್ಯಾಂಕ್ ದಾಖಲೆ ಆರ್ಥಿಕ ವ್ಯವಹಾರ: 131.14 ಕೋಟಿ ರೂ ಲಾಭ
- HOME - LATEST NEWS

SCDCC ಬ್ಯಾಂಕ್ ದಾಖಲೆ ಆರ್ಥಿಕ ವ್ಯವಹಾರ: 131.14 ಕೋಟಿ ರೂ ಲಾಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಬ್ಯಾಂಕು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತನ್ನ 113 ಶಾಖೆಗಳ ಮೂಲಕ ಆರ್ಥಿಕ ವರ್ಷದಲ್ಲಿ ಅಮೋಘ ಸಾಧನೆಯನ್ನು ಗೈದಿದೆ. 2026ರ ಮಾರ್ಚ್ ತಿಂಗಳ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.131.14ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (ರೂ.110.41 ಕೋಟಿ) ಕ್ಕಿಂತ ಶೇಕಡಾ 18.78% ಏರಿಕೆಯಾಗಿದೆ. ಇದು ರಾಜ್ಯದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳ ಪೈಕಿ ಸಾರ್ವಕಾಲಿಕ ದಾಖಲೆ ಲಾಭಗಳಿಕೆಯಾಗಿದೆ ಎಂದು ದಕ್ಷಿಣ […]

Share News

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಬ್ಯಾಂಕು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತನ್ನ 113 ಶಾಖೆಗಳ ಮೂಲಕ ಆರ್ಥಿಕ ವರ್ಷದಲ್ಲಿ ಅಮೋಘ ಸಾಧನೆಯನ್ನು ಗೈದಿದೆ. 2026ರ ಮಾರ್ಚ್ ತಿಂಗಳ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.131.14ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (ರೂ.110.41 ಕೋಟಿ) ಕ್ಕಿಂತ ಶೇಕಡಾ 18.78% ಏರಿಕೆಯಾಗಿದೆ. ಇದು ರಾಜ್ಯದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳ ಪೈಕಿ ಸಾರ್ವಕಾಲಿಕ ದಾಖಲೆ ಲಾಭಗಳಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬ್ಯಾಂಕಿನ ಅನುತ್ಪಾದಕ ಆಸ್ತಿಯ ಪ್ರಮಾಣವು ಶೇ.2.42 ನಿಂದ ಶೇ.2.21 ಪ್ರಮಾಣಕ್ಕೆ ಇಳಿಕೆಯಾಗಿದೆ. ಇದು ಬ್ಯಾಂಕಿನ ಪ್ರಗತಿಯನ್ನು ಸೂಚಿಸುತ್ತದೆ. ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಿಶಿಷ್ಟ ಹಾಗೂ ವಿನೂತನ ಸೇವೆ ಗಳನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿದೆ. ಅಭಿವೃದ್ಧಿಯ ಮುಂಚೂಣಿಯಲ್ಲಿರುವ ಬ್ಯಾಂಕ್ ಕೋರ್ ಬ್ಯಾಂಕಿಂಗ್ ಮತ್ತು ಮೊಬೈಲ್‌ ಬ್ಯಾಂಕಿಂಗ್‌ ನಂತಹ ಉತ್ಕೃಷ್ಟ ಬ್ಯಾಂಕಿಂಗ್‌ ವ್ಯವಸ್ಥೆಯ ಜೊತೆಗೆ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಮೂಲಕ ಯು.ಪಿ.ಐ. (UPI) ಮತ್ತು ಐ.ಎಮ್.ಪಿ.ಎಸ್. (IMPS) ಸೌಲಭ್ಯಗಳನ್ನು ಅಳವಡಿಸಿಕೊಂಡು ಗಣನೀಯ ಪ್ರಗತಿಯನ್ನು ಕಂಡಿದೆ.

ದಾಖಲೆಯ ರೂ.20226.19 ಕೋಟಿ ವ್ಯವಹಾರ, ದಾಖಲೆಯ ರೂ. 131.14 ಕೋಟಿ ಲಾಭ :-ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವ ಹಿಸುತ್ತಿರುವ ಎಸ್‌ ಸಿಡಿಸಿಸಿ ಬ್ಯಾಂಕ್ ಗ್ರಾಹಕರನ್ನು ಹೆಚ್ಚು ಆಕರ್ಷಿ ಸುತ್ತಿದ್ದು 2025-26ನೇ ವರದಿ ವರ್ಷದಲ್ಲಿ ರೂ.20226.19 ಕೋಟಿ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕೆ (ರೂ.17366.68 ಕೋಟಿ) ಹೋಲಿಸಿದರೆ ಈ ಬಾರಿ ಶೇ.16.47% ಏರಿಕೆಯನ್ನು ಕಂಡು ರಾಜ್ಯದಲ್ಲೇ ಹೊಸ ದಾಖಲೆಯನ್ನು ನಿರ್ಮಿಸಿದೆ. 2026-27ನೇ ಸಾಲಿಗೆ ರೂ.22500.00 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಎಂ. ವಾದಿರಾಜ ಶೆಟ್ಟಿ, ಭಾಸ್ಕರ್ ಎಸ್.ಕೋಟ್ಯಾನ್, ಶಶಿಕುಮಾ‌ರ್ ರೈ ಬಾಲ್ಗೊಟ್ಟು,ದೇವಿಪ್ರಸಾದ್‌ ಶೆಟ್ಟಿ ಬೆಳಪು, ಅಶೋಕ್‌ ಕುಮಾರ್ ಶೆಟ್ಟಿ, ಎಂ.ಮಹೇಶ್ ಹೆಗ್ಡೆ, ಮೋನಪ್ಪ ಶೆಟ್ಟಿ ಎಕ್ಕಾರು, ಜೈರಾಜ್ ಬಿ.ರೈ ಸದಾಶಿವ ಉಳ್ಳಾಲ್, ರಾಜೇಶ್ ರಾವ್,ಎಸ್.ಎನ್. ಮನ್ಮಥ, ಕುಶಾಲಪ್ಪ ಗೌಡ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲ ಕೃಷ್ಣ ಭಟ್ ಕೆ., ಇವರು ಉಪಸ್ಥಿತರಿದ್ದರು.

9264.64 ಕೋಟಿ ರೂ. ಠೇವಣಿ ಸಂಗ್ರಹ;-

ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ತನ್ನ 113 ಶಾಖೆಗಳ ಮುಖಾಂತರ ಒಟ್ಟು ರೂ.9264.64 ಕೋಟಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ.17.53 ಹೆಚ್ಚಾಗಿದೆ.

ಸ್ಪರ್ಧಾತ್ಮಕ ವ್ಯವಹಾರದಲ್ಲಿ ನ್ಯಾಂಕ್ ರೂ.9766.75 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.2106.50 ಕೋಟಿ ರೂಪಾಯಿ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ ರೂ.10961.5ರ ಕೋಟಿಯಾಗಿರುತ್ತದೆ.ಸತತ 31 ವರ್ಷಗಳಿಂದ ಕೃಷಿ ಸಾಲ ಮರು ಪಾವತಿಯಲ್ಲಿ ಶೇಕಡಾ 100ರ ಸಾಧನೆ ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ 100ರ ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 31 ವರ್ಷಗಳಿಂದ ಬ್ಯಾಂಕ್ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.

ಬ್ಯಾಂಕ್ ಗೆ ಒಟ್ಟು 1104 ಸಂಘಗಳು ಸದಸ್ಯರಾಗಿವೆ. ಬ್ಯಾಂಕಿನ ಒಟ್ಟು ಪಾಲು ಬಂಡವಾಳ ರೂ.554.08 ಕೋಟಿ ಆಗಿರುತ್ತದೆ.

ದುಡಿಯುವ ಬಂಡವಾಳ ರೂ.15027.66 ಕೋಟಿ ಆಗಿದ್ದು. ಇದು ಕಳೆದ ವರ್ಷಕ್ಕಿಂತ (ರೂ.12764.99 ಕೋಟಿ) ಶೇಕಡ 17.73% ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.312.84 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ. ಶೇಕಡ 16.10% ರಷ್ಟು ಏರಿಕೆ ಕಂಡಿದೆ.

“ರುಪೇ” (RuPay) ಕಿಸಾನ್ ಕ್ರೆಡಿಟ್ ಕಾರ್ಡ್

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕಾರ್ಡ್‌ನ್ನು ನೀಡಿದೆ. ಈಗಾಗಲೇ 1,44,701 ರುಪೇ ಕಿಸಾನ್ ಕಾರ್ಡ್ ಗಳನ್ನು ರೈತರಿಗೆ ವಿತರಿಸಲಾಗಿದೆ. 92,531 ರುಪೇ ಡೆಬಿಟ್ ಕಾರ್ಡ್ ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ.

ಮುಂದಿನ ಯೋಜನೆ:-

* 10 ಹೊಸ ಶಾಖೆಗಳು : ಬ್ಯಾಂಕ್ ಮುಂದಿನ ಅವಧಿಯಲ್ಲಿ 10 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದೆ.

ಬ್ಯಾಂಕಿಗೆ ದೊರೆತ ಪ್ರಶಸ್ತಿಗಳು

ಬ್ಯಾಂಕಿಗೆ 23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 19 ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ.

* ಎರಡು ಬಾರಿ “ಎಫ್‌ಸಿಬಿಎ” ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್ ಪುರಸ್ಕೃತಗೊಂಡಿದೆ.

ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಎರಡು ಬಾರಿ ಪ್ರತಿಷ್ಠಿತ “ಬ್ಯಾಂಕ್ ಬ್ಲೂ ರಿಬ್ಬನ್ ಪ್ರಶಸ್ತಿ” ಲಭಿಸಿದೆ ಎಂದವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಮಹತ್ತರ ಯೋಜನೆಯಾದ “ಅಟಲ್ ಪಿಂಚಣಿ ಯೋಜನೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ನೋಂದಾಯಿಸಿ, ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ 4 ಬಾರಿ ಪ್ರಶಸ್ತಿಗೆ ಪಾತ್ರವಾಗಿದೆ

ಬ್ಯಾಂಕಿನ ಸಾಧನೆ:-

ಇಂಟ‌ರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ (IMPS -Inter Bank Mobile Payment System) ಯೋಜನೆಯನ್ನು ಬ್ಯಾಂಕ್ ವರದಿ ವರ್ಷದಲ್ಲಿ ಕಾರ್ಯಗತ ಗೊಳಿಸಿದೆ. ಈ ಯೋಜನೆಯಿಂದ ಗ್ರಾಹಕರು ಹೆಚ್ಚು ಆಕರ್ಷಿತರಾಗಿರುವುದು ಕಂಡು ಬಂದಿದೆ. ಮೊಬೈಲ್ ಮುಖಾಂತರ ತಮ್ಮ ಖಾತೆಯಿಂದ ಇತರ ಬ್ಯಾಂಕಿನ ಖಾತೆಗೆ ಹಣವನ್ನು ಸುಲಭವಾಗಿ ವರ್ಗಾಯಿಸುತ್ತಿದ್ದಾರೆ.

ಬ್ಯಾಂಕಿನ ಮತ್ತೊಂದು ಮಹಾತ್ವಾಕಾಂಕ್ಷೆಯ ಯುನಿಫೈಡ್ (Unified Payments Interface UPI) ಯುಪಿಐ ಪಾವತಿ ವಿಧಾನವಾಗಿದ್ದು, ಈ ವಿಧಾನದಲ್ಲೂ ಗ್ರಾಹಕರು ತಮ್ಮ ಸ್ಮಾರ್ಟ್ ಫೋನ್ ನ್ನು ವರ್ಚುವಲ್ ಡೆಬಿಟ್ ಕಾರ್ಡ್ ನಂತೆ ಬಳಸಿ. ತ್ವರಿತವಾಗಿ ಪಾವತಿ ಮತ್ತು ಸ್ವೀಕೃತಿ ಸಾಧ್ಯವಾಗಿರುತ್ತದೆ. ಮಾತ್ರವಲ್ಲ ಯುಪಿಐ ಸೇವೆಗಳಾದ ಗೂಗಲ್ ಪೇ, ಫೋನ್ ಪೇ ಹಾಗೂ ಇತರ ಪಾವತಿ ವಿಧಾನವನ್ನು ಸುಲಭವಾಗಿ ಬಳಸುತ್ತಿದ್ದಾರೆ. ಇದರಿಂದ ವಿದ್ಯುತ್ ಬಿಲ್, ನೀರಿನ ಬಿಲ್‌ ಹಾಗೂ ಟೆಲಿಫೋನ್ ಬಿಲ್‌ಗಳನ್ನು ಗ್ರಾಹಕರು ಸುಲಭವಾಗಿ ಪಾವತಿಸುತ್ತಿದ್ದಾರೆ. ಯುಪಿಐ ಚಾಲಿತ ಆ್ಯಪ್‌ಗಳೊಂದಿಗೆ QR Code ಸ್ಕ್ಯಾನ್ ಮಾಡುವ ಮೂಲಕ ವ್ಯಾಪಾರ ಕೇಂದ್ರಗಳಲ್ಲೂ ಈ ಮಾದರಿಯನ್ನು ಉಪಯೋಗಿಸುತ್ತಿದ್ದಾರೆ.

ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‌ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ. ಬ್ಯಾಂಕ್ ಒಟ್ಟು 34765 ಗುಂಪುಗಳನ್ನು ಹೊಂದಿದೆ. ಜಿಲ್ಲೆಯಲ್ಲಿ ಒಟ್ಟು 1,68,583 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. 84,797 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ.

ಬ್ಯಾಂಕಿನ ಎಲ್ಲಾ ಶಾಖೆಗಳು ಸಂಪೂರ್ಣ ಗಣಕೀಕೃತಗೊಂಡು ಏಕಗವಾಕ್ಷಿ. ಆ‌ರ್.ಟಿ.ಜಿ. ಎಸ್/ ನೆಫ್ಟ್ ಹಾಗೂ ಕೋರ್ ಬ್ಯಾಂಕಿಂಗ್ ನಂತಹ ಉತ್ಕೃಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕಿನ 20 ಶಾಖೆಗಳು ಸಂಪೂರ್ಣ ಹವಾನಿಯಂತ್ರಿತವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್ ಎನ್ನುವ ಆಶಯದೊಂದಿಗೆ ಸುಸಜ್ಜಿತ ವಾಹನದಲ್ಲಿ (Bank on Wheel) ಕಾರ್ಯರೂಪಕ್ಕೆ ತಂದ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಹೆಗ್ಗಳಿಕೆ. ಈಗಾಗಲೇ ಮಂಗಳೂರು ಹಾಗೂ ಉಡುಪಿಯಲ್ಲಿ “ಮೊಬೈಲ್ ಬ್ಯಾಂಕಿಂಗ್” ವ್ಯವಸ್ಥೆಯು ಕಾರ್ಯರೂಪದಲ್ಲಿದೆ.

ಬ್ಯಾಂಕಿನ ಎಲ್ಲಾ ಶಾಖೆಗಳ ಭದ್ರತೆಯ ಹಿತದೃಷ್ಟಿಯಿಂದ ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ. ಬ್ಯಾಂಕ್ ಸಿಬ್ಬಂದಿಗಳಿಗೆ ಪಿಂಚಣಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯದ ಮೊದಲ ಕೇಂದ್ರ ಸಹಕಾರಿ ಬ್ಯಾಂಕ್.

ತರಬೇತಿ ಕೇಂದ್ರ:-ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿ ಸುತ್ತಿರುವ ಅಧ್ಯಕ್ಷರು ಹಾಗೂ ನಿರ್ದೇಶಕರು ಮತ್ತು ಸದಸ್ಯರಿಗೆ ಸಹಕಾರಿ ಕ್ಷೇತ್ರದ ಬಗ್ಗೆ ವಿಶೇಷ ಅನುಭವ ನೀಡಲು ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರವನ್ನು ಬ್ಯಾಂಕ್‌ ಹೊಂದಿದೆ.

ಟ್ಯಾಬ್ ಬ್ಯಾಂಕಿಂಗ್: – ಬ್ಯಾಂಕ್ ವ್ಯವಹಾರವನ್ನು ಸರಳೀಕರಿಸುವ ನಿಟ್ಟಿನಲ್ಲಿ ಟ್ಯಾಬ್‌ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗ್ರಾಹಕರಿಗೆ ಬ್ಯಾಂಕ್‌ ಪರಿಚಯಿಸಿದೆ. ಮನೆ ಅಥವಾ ಕಛೇರಿಗಳಲ್ಲಿ ಕುಳಿತು ಮೊಬೈಲ್ ಸಂಪರ್ಕವಿರುವ ಬ್ಯಾಂಕಿನ ಟ್ಯಾಬ್ಲೆಟ್ ಬಳಸಿ ತಮ್ಮ ಬ್ಯಾಂಕ್ ಖಾತೆಯನ್ನು ತೆರೆಯುವ ಹಾಗೂ ನಿರ್ವಹಿಸುವ ನೂತನ ವ್ಯವಸ್ಥೆ ಇದಾಗಿದೆ. ಇದರಿಂದ ಗ್ರಾಹಕರು ಪ್ರತಿ ಬಾರಿ ಶಾಖೆಗಳಿಗೆ ಅಲೆದಾಡುವುದು ತಪ್ಪುತ್ತದೆ.

* ಮೊಬೈಲ್ ಆ್ಯಪ್ : ಈ ಯೋಜನೆಯ ಮುಖಾಂತರ ಗ್ರಾಹಕರ ಮೊಬೈಲ್ ಮೂಲಕ ಬ್ಯಾಂಕಿನಶಾಖೆಗಳ ನಡುವೆ ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಹಣ ವರ್ಗಾಯಿಸಬಹುದು. ಅಲ್ಲದೆ ಮೊಬೈಲ್ ಮುಖಾಂತರವೇ ಗ್ರಾಹಕರ ಖಾತೆಯ ವ್ಯವಹಾರದ ವಿಚಾರಣೆ. ಮಿನಿಸ್ಟೇಟ್‌ಮೆಂಟ್ ಹಾಗೂ ಪಾಸ್‌ಬುಕ್ ನಿರ್ವಹಣೆಯ ಸೌಲಭ್ಯ ಪಡೆಯಬಹುದಾಗಿದೆ.

ಎ.ಟಿ.ಎಂ. ಅಳವಡಿಕೆ: -ಬ್ಯಾಂಕಿನ ಮುಖ್ಯ ಶಾಖೆಗಳಲ್ಲಿ ಎಟಿಎಂ ಅಳವಡಿಸಲಾಗಿದ್ದು. ಈಗಾಗಲೇ ಉಭಯ ಜಿಲ್ಲೆಗಳ 16 ಶಾಖೆಗಳಲ್ಲಿ ಎ.ಟಿ.ಎಂ. ಅಳವಡಿಸಲಾಗಿದೆ ಎಂದುಡಾ| ಎಂ. ಎನ್. ರಾಜೇಂದ್ರ ಕುಮಾ‌ರ್ ತಿಳಿಸಿದ್ದಾರೆ.

Share News