ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ – 2025, ಏಪ್ರಿಲ್ 16 ಮತ್ತು 17ರಂದು ನಡೆಯಲಿದೆ.
ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಶಾಂತಿಯುತವಾಗಿ ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
ನಿಷೆೀಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪರ‍್ಣ ನಿಷೆೀಧಿಸಿದೆ.
ನಿಷೆೀಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೆೀಧಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸನ್ನೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪರ‍್ಣವಾಗಿ ನಿಷೆೀಧಿಸಲಾಗಿದೆ. ಪರೀಕ್ಷಾ ದಿನದಂದು ಪರೀಕ್ಷೆ ಮುಕ್ತಾಯವಾಗುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಮತ್ತು ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಸೈಬರ್ ಅಂಗಡಿಗಳು ಕರ‍್ಯನರ‍್ವಹಿಸುವುದನ್ನು ನಿಷೆೀಧಿಸಿ ಆದೇಶಿಸಿದ್ದಾರೆ.