canaratvnews

ಉತ್ತರಕಾಂಡ ಭಾರೀ ಮೇಘಸ್ಪೋಟ: 59ಕ್ಕೂ ಅಧಿಕ ಮಂದಿ ಕಣ್ಮರೆ

ಉತ್ತರಕಾಶಿ: ಉತ್ತರಕಾಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

ಈ ಬಗ್ಗೆ ಮಾತನಾಡಿದ ರಕ್ಷಣಾ (PRO) ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ, ಡೆಹ್ರಾಡೂನ್ ದುರಂತದ ಪ್ರಮಾಣ ಮತ್ತು ಸೇನೆಯ ತಕ್ಷಣದ ಕಾರ್ಯಾಚರಣೆಯನ್ನು ದೃಢಪಡಿಸಿದರು.

ಖೀರ್ ಗಡ್, ಧರಾಲಿಯಲ್ಲಿ ಸಂಭವಿಸಿದ ವಿನಾಶಕಾರಿ ಮಣ್ಣಿನ ಕುಸಿತದ ಹಿನ್ನೆಲೆಯಲ್ಲಿ, 14 RAJRIF ನ ಕಮಾಂಡಿಂಗ್ ಆಫೀಸರ್ ಕರ್ನಲ್ ಹರ್ಷವರ್ಧನ್  150 ಸಿಬ್ಬಂದಿಯನ್ನು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಮುನ್ನಡೆಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಆರಂಭದಲ್ಲಿ ಕಣ್ಮರೆಯಾಗಿದ್ದ 11 ಸೇನಾ ಸಿಬ್ಬಂದಿಗಳಲ್ಲಿ ಇಬ್ಬರು ಸುರಕ್ಷಿತವಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಇದುವರೆಗೆ 20 ನಾಗರಿಕರನ್ನು ಸಹ ರಕ್ಷಿಸಲಾಗಿದೆ. ಭರದಿಂದ ರಕ್ಷಣಾ ಕಾರ್ಯಾಚರಣೆ ಸಾಗಿದೆ.

ಮೊದಲ ಮೇಘಸ್ಫೋಟದಿಂದ ಧಾರಾಲಿ ಗ್ರಾಮದ ಕಡೆಗೆ ಮಣ್ಣು, ಗುಡ್ಡ ಕುಸಿತ, ಕೆಸರು ನೀರು ಹರಿಯುವುದರೊಂದಿಗೆ ಭಾರಿ ಆತಂಕ ಸೃಷ್ಟಿಯಾಯಿತು. ಜನರು ಭಯದಿಂದ ಕಿರುಚಾಡಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಹರ್ಸಿಲ್ ಸೇನಾ ಶಿಬಿರದ ಮುಂಭಾಗದಲ್ಲಿರುವ ಹರ್ಸಿಲ್‌ನಲ್ಲಿರುವ ಸೇನಾ ಘಟಕದ ಬಳಿ ಮಂಗಳವಾರ ಸಂಜೆ ಎರಡನೇ ಮೇಘಸ್ಫೋಟ ಸಂಭವಿಸಿದೆ.

Share News
Exit mobile version