ಮಂಗಳೂರು, ಏಪ್ರಿಲ್ 21: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2024-25ನೇ ಸಾಲಿನ ‘ಹೊಲಿಗೆ ಯಂತ್ರ ವಿತರಣೆ ಯೋಜನೆ’ಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸರ್ಕಾರದ ಕಲ್ಯಾಣ ಯೋಜನೆಗಳು ನಿಜವಾದ ಅರ್ಹರಿಗೆ ತಲುಪಬೇಕು ಎಂಬುದು ನಮ್ಮ ಉದ್ದೇಶವಾಗಿದ್ದು, ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಯೋಜನಾಧಿಕಾರಿ ಶ್ರೀಮತಿ ಸುಕನ್ಯಾ, ಸಹಾಯಕ ಲೆಕ್ಕಾಧಿಕಾರಿ ಶ್ರೀ ಪರಮೇಶ್ವರ ಹಾಗೂ ಸಹಾಯಕ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಶ್ರೀ ಸೇರಿದಂತೆ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.