ಮಂಗಳೂರು: ಖಾಸಗಿ ಬಸ್‌ನ ಕಂಡಕ್ಟರ್‌ನೋರ್ವ ವಿದ್ಯಾರ್ಥಿನಿಯರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿ ಪೊಲೀಸರ ಅತಿಥಿಯಾದ ಘಟನೆ ಮಂಗಳೂರು-ವಿಟ್ಲ ರೂಟಿನ ಸೆಲೀನಾ ಬಸ್‌ನಲ್ಲಿ ನಡೆದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಕರಣದ ವಿವರ
ಉಪ್ಪಿನಂಗಡಿಯ ಕಲ್ಲೇರಿ ನಿವಾಸಿಯಾದ ಇರ್ಫಾನ್ (32) ಮಂಗಳೂರು-ವಿಟ್ಲ ರೂಟಿನ ಸೆಲೀನಾ ಬಸ್‌ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು. ಆತ ಜು.9 ರಂದು ಸಂಜೆ ಸುಮಾರು 5:00 ಗಂಟೆಗೆ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶನ ಮಾಡಿದ್ದಾನೆ. ಜೊತೆಗೆ ಅಸಭ್ಯವಾದ ಸನ್ನೆಯನ್ನು ಮಾಡಿ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿಯರು ಮಂಗಳೂರು ದಕ್ಷಿಣ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


