• Home  
  • ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿ ಮಹೇಶ್‌ ಭಟ್‌ ಬಂಧನಕ್ಕೆ ಒತ್ತಾಯ
- DAKSHINA KANNADA - HISTORY - HOME

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿ ಮಹೇಶ್‌ ಭಟ್‌ ಬಂಧನಕ್ಕೆ ಒತ್ತಾಯ

ಬಂಟ್ವಾಳ: ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು  ಸಮಗ್ರ ತನಿಖೆಗೊಳಪಡಿಸಬೇಕು ಮತ್ತು ಆರೋಪಿ ಮಹೇಶ್ ಭಟ್‌ನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಡಿವೈಎಫ್‌ಐ, ಡಿಎಚ್‌ಎಸ್, ಜೆಎಮ್‌ಎಸ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಎಸ್‌ಎಫ್‌ಐ ದ.ಕ. ಜಿಲ್ಲಾ ಸಮಿತಿಗಳ ಮುಖಂಡರು ದ.ಕ. ಜಿಲ್ಲಾ ಎಸ್ಪಿಯನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಆರೋಪಿಯ ವಿರುದ್ಧ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ ಕೂಡ ಆತನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಅಲ್ಲದೆ ಈ ಪ್ರಕರಣವು ಸ್ಥಳೀಯವಾಗಿ ಹಲವು ಅನುಮಾನಗಳಿಗೆ ಎಡೆಮಾಡಿದೆ. ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಊಹಾಪೋಹಗಳು ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದೆ.

ಮಹೇಶ್ ಭಟ್ ಎಂಬಾತನು ಜ.12 ರಂದು ದಲಿತ ಕೂಲಿ ಕಾರ್ಮಿಕನ ಮಗಳಾಗಿರುವ SSLC ಓದುತ್ತಿರುವ 16 ವರ್ಷದ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಈ ಬಗ್ಗೆ ಎಲ್ಲಿಯೂ ಬಾಯಿ ಬಿಡದಂತೆ ಬೆದರಿಕೆಯನ್ನು ಒಡ್ಡಿದ್ದ. ಬಾಲಕಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗದಿರುವುದರಿಂದ ಅನುಮಾನಗೊಂಡು ವಿಚಾರಿಸಲು ಶಾಲೆಯ ಶಿಕ್ಷಕರು ಆಕೆಯ ಮನೆಗೆ ತೆರಳಿದ್ದ ವೇಳೆ ಬಾಲಕಿಗೆ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಆಕೆಯನ್ನು ಮಾತನಾಡಿಸಲು ಶಿಕ್ಷಕರಿಗೆ ಪೋಷಕರು ಅವಕಾಶ ಕಲ್ಪಿಸಿಲ್ಲ ಎನ್ನಲಾಗಿದೆ. ಇದು ಯಾವುದೋ ಒತ್ತಡಕ್ಕೆ ಒಳಗಾಗಿರುವ ಸಾಧ್ಯತೆ ಇದೆ. ಅಲ್ಲದೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678