ಮಂಗಳೂರು: ಏಪ್ರಿಲ್ 14: ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಜನತಾದಳದ (ಜೆಡಿಎಸ್) ನೂತನ ಕಾರ್ಯಾಧ್ಯಕ್ಷರಾಗಿ ಶ್ರೀ ಶಶಿರಾಜ್ ಶೆಟ್ಟಿ ಕೊಳಂಬೆ
ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ಈ ನೇಮಕಾತಿಯನ್ನು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಜ್ಯ ಘಟಕವು ಪ್ರಕಟಿಸಿದ ನೂತನ ಪದಾಧಿಕಾರಿಗಳ ಪಟ್ಟಿಯ ಕುರಿತು ಜಿಲ್ಲಾಧ್ಯಕ್ಷರಾದ ಮಾಧವ ಗೌಡ
ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಶಶಿರಾಜ್ ಶೆಟ್ಟಿ ಅವರ ನೇಮಕದಿಂದ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಮತ್ತು ಕಾರ್ಯಚಟುವಟಿಕೆಗಳಿಗೆ ಹೆಚ್ಚಿನ ಬಲ ಬರಲಿದೆ ಎಂದು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಲಾಯಿತು. ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ನೂತನ ಕಾರ್ಯಾಧ್ಯಕ್ಷರಿಗೆ ಶುಭಾಶಯ ಕೋರಿದ್ದಾರೆ
