ವಿಟ್ಲ,ಮಾಣಿಲ: ಶಿವಾಜಿ ಸ್ಪೋರ್ಟ್ಸ್ ಕ್ಲಬ್ ತಲೆಕ್ಕಿಮಾರ್, ಮಾಣಿಲ ಇದರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 23ನೇ ವರ್ಷದ ಮೊಸರು ಕುಡಿಕೆ ಉತ್ಸವವು ಇಂದು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು.

ಬೆಳಗ್ಗೆ ನಡೆದ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ಮನೋಹರ ರೈ ಕೆಳಗಿನಮನೆ, ಸುಂದರ ಕುಲಾಲ್ ಪಕಳಕುಂಜ ಹಾಗೂ ಉದಯ ಪೂಜಾರಿ ಪಕಳಕುಂಜ ಅವರು ಜಂಟಿಯಾಗಿ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ವಿಷ್ಣು ಕನ್ನಡಗುಳಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಭಕ್ತಾದಿಗಳಿಗೆ ಆಶೀರ್ವಚನ ನೀಡಿದರು. ಜಗನ್ನಾಥ ರೈ ಕೆಳಗಿನ ಮನೆ ರವರ ಗೌರವ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ಶ್ರೀ ಗಣೇಶ ಕುಮಾರ್ ದೇಲಂತಮಜಲು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಸಾಧಕರಿಗೆ ಗೌರವ ಸನ್ಮಾನ:
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಮಾಜ ಸೇವಕರಾದ ರಾಜಾರಾಂ ನಾಯಕ್ ಮತ್ತು ಸಾವಯವ ಕೃಷಿಕ ಸುರೇಶ್ ಪೂಜಾರಿ ಅವರನ್ನು ಕ್ಲಬ್ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಗೌರವಿಸಲಾಯಿತು.

ಶಿವಾಜಿ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾದ ಸೂರಜ್ ರೈ ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಪ್ರಕಾಶ್ ಮೇಲಿನ್ದನೆ ವಂದನಾರ್ಪಣೆ ಮಾಡಿದರು. ಸುಂದರ ಕುಲಾಲ್ ಪಕಳಕುಂಜ ಕಾರ್ಯಕ್ರಮವನ್ನು ನಿರೂಪಿಸಿದರು. ಉತ್ಸವದಲ್ಲಿ ಕ್ಲಬ್‌ನ ಪದಾಧಿಕಾರಿಗಳು, ಸ್ಥಳೀಯರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
