canaratvnews

ಬಾಲಿವುಡ್‌ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್‌ ನಿರ್ದೇಶಕ ಹಾಗೂ ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಮುಂಬೈನ ಜುಹುವಿನಲ್ಲಿರುವ  ಈ ಘಟನೆ ಶನಿವಾರ ರಾತ್ರಿ ನಡೆದಿದೆ.

ಐದು ಸುತ್ತು ಗುಂಡು ಹಾರಿಸಲಾಗಿದೆ. ಈ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಪೊಲೀಸರು ಧೃಡಪಡಿಸಿದ್ದಾರೆ.

ಸದ್ಯ ಈ  ಪ್ರಕರಣದಲ್ಲಿ ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧಿತರು ಪುಣೆಯ ನಿವಾಸಿಗಳಾಗಿದ್ದಾರೆ. ಈ ದಾಳಿಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಂಪರ್ಕ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಘಟನೆ ಬಳಿಕ ರೋಹಿತ್ ಶೆಟ್ಟಿ ಅವರ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಬಿಷ್ಣೋಯ್ ಗ್ಯಾಂಗ್ ಈ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದು,

ತನಿಖೆ ನಡೆಯುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಮತ್ತು ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಆಗಮಿಸಿ ಸ್ಯಾಂಪಲ್‌ಗಳನ್ನು ಸಂಗ್ರಹಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.  ಘಟನೆಯಿಂದ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಗಿದೆ.

Share News
Exit mobile version