ಮಂಗಳೂರು, ಅ.9: ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬ್ರಿಟಿμï ಕಾಮನ್‍ವೆಲ್ತ್ ಗಣರಾಜ್ಯವಾಗಿರುವ ಬಾಬ್ರ್ಡೋಸ್ ದೇಶದ ರಾಜಧಾನಿ ಬ್ರಿಜ್ಡಟೌನ್ ನಗರದಲ್ಲಿ ಅಕ್ಟೋಬರ್ 6 ರಿಂದ ಆರಂಭಗೊಂಡಿರುವ “68 ನೇ ಕಾಮನ್‍ವೆಲ್ತ್ ಸಂಸದೀಯ ಸಮಾವೇಶ”ದಲ್ಲಿ ಲೋಕಸಭಾಧ್ಯಕ್ಷ ಒಂ ಬಿರ್ಲಾ, ರಾಜ್ಯಸಭೆಯ ಉಪಸಭಾಪತಿ ಹರಿವಂಶ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮತ್ತಿತರರು ಪಾಲ್ಗೊಂಡಿದ್ದಾರೆ.

ಈ ಸಮಾವೇಶದಲ್ಲಿ ಜಗತ್ತಿನ ವಿವಿಧ ದೇಶಗಳ ಪ್ರತಿನಿಧಿಗಳು, ಲೋಕಸಭಾಧ್ಯಕ್ಷರು, ರಾಜ್ಯಸಭೆಯ ಉಪ ಸಭಾಪತಿಗಳು, ವಿವಿಧ ರಾಜ್ಯಗಳ ವಿಧಾನ ಸಭೆ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂಡಿದ್ದಾರೆ.
*ಬಾಬ್ರ್ಡೋಡಸ್ ಪ್ರಧಾನಿ – ಸ್ಪೀಕರ್ ಭೇಟಿ*
ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬ್ರಿಟಿμï ಕಾಮನ್‍ವೆಲ್ತ್ ಗಣರಾಜ್ಯವಾದ ಬಾಬ್ರ್ಡೋಸ್ ದೇಶದ ರಾಜಧಾನಿ ಬ್ರಿಜ್ಡಟೌನ್ ನಗರದಲ್ಲಿ ಅಕ್ಟೋಬರ್ 6 ರಿಂದ ಆರಂಭಗೊಂಡಿರುವ “68 ನೇ ಕಾಮನ್‍ವೆಲ್ತ್ ಸಂಸದೀಯ ಸಮಾವೇಶ” ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಬಾಬ್ರ್ಡೋಡಸ್‍ನ ಪ್ರಧಾನಿ ಮಿಯಾ ಅಮೂರ್ ಮೂಟ್ಲೆ ಅವರನ್ನು ಭೇಟಿ ಮಾಡಿದರು.