ಬೆಂಗಳೂರು, ಮೇ 02: 2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ (SSLC Result) ಪ್ರಕಟವಾಗಿದೆ.ದ.ಕ. ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಮಧ್ಯಾಹ್ನ 12.30ರ ನಂತರ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಿದ್ದು, https://karresults.nic.in ಜಾಲತಾಣದಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಸದ್ಯ ಪಾಸಾಗಿರುವ ವಿದ್ಯಾರ್ಥಿಗಳ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.