ಮಂಗಳೂರು: ಕರ್ನಾಟಕ ಸರ್ಕಾರ ಮಂಡಿಸಿರುವ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಕರಾವಳಿ ಭಾಗದ ಪ್ರಗತಿಗೆ ವಿಶೇಷ ಒತ್ತು ನೀಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಪ್ರಶಂಸಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಇಂದಿನ ಬಜೆಟ್ ಜನಪರ ಮತ್ತು ಅಭಿವೃದ್ಧಿ ಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರ ಆಶೋತ್ತರಗಳಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಿರುವುದು ಸ್ವಾಗತಾರ್ಹ” ಎಂದಿದ್ದಾರೆ.
ಕರಾವಳಿಗೆ ವಿಶೇಷ ಆದ್ಯತೆ:
ಕರಾವಳಿ ಜಿಲ್ಲೆಗಳ ಪ್ರಮುಖ ಆಧಾರಸ್ತಂಭಗಳಾದ ಪ್ರವಾಸೋದ್ಯಮ ಮತ್ತು ಮೀನುಗಾರಿಕಾ ವಲಯಕ್ಕೆ ಬಜೆಟ್ನಲ್ಲಿ ವಿಶೇಷ ಮನ್ನಣೆ ಸಿಕ್ಕಿದೆ. ಇದರೊಂದಿಗೆ ಪೊಲೀಸ್ ಠಾಣೆಗಳ ಬಲವರ್ಧನೆ, ಅರಣ್ಯ ಸಂರಕ್ಷಣೆ, ಆರೋಗ್ಯ ಮತ್ತು ಕೃಷಿ ಕ್ಷೇತ್ರಕ್ಕೆ ನೀಡಿರುವ ಅನುದಾನವು ಈ ಭಾಗದ ಆಡಳಿತ ಮತ್ತು ಆರ್ಥಿಕ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ವ ಜನಾಂಗದ ಕಲ್ಯಾಣ:
“ಮುಜರಾಯಿ, ಅಲ್ಪಸಂಖ್ಯಾತರ ಅಭಿವೃದ್ಧಿ, ವಸತಿ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಬಜೆಟ್ನಲ್ಲಿ ಆದ್ಯತೆ ನೀಡುವ ಮೂಲಕ ಸರ್ಕಾರ ಎಲ್ಲಾ ವರ್ಗದ ಸಮುದಾಯಗಳ ಕಲ್ಯಾಣಕ್ಕೆ ಬದ್ಧವಾಗಿದೆ. ಇದು ರಾಜ್ಯದ ಸಮಗ್ರ ಹಾಗೂ ಕರಾವಳಿಯ ಸರ್ವತೋಮುಖ ಅಭಿವೃದ್ಧಿಗೆ ಒಂದು ಮಹತ್ವದ ಹೆಜ್ಜೆಯಾಗಿದೆ,” ಎಂದು ರಮಾನಾಥ ರೈ ಅವರು ತಿಳಿಸಿದ್ದಾರೆ.