ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಜು.2 ರಂದು ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.


ಆದರೆ ಕೆಲವು ಖಾಸಗಿ ಶಾಲಾ-ಕಾಲೇಜು ಸಂಸ್ಥೆಗಳು ತರಗತಿಗಳನ್ನು ನಡೆಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಷಯಗಳು ಹರಿದಾಡುತ್ತಿವೆ. ಈ ಹಿನ್ನೆಲೆ ಜಿಲ್ಲಾಡಳಿತದ ಆದೇಶದ ವಿರುದ್ಧ ತರಗತಿ ನಡೆಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


