canaratvnews

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 14 ಕಡೆ ಏಕಕಾಲಕ್ಕೆ NIA ದಾಳಿ

ಮಂಗಳೂರು:  ಹಿಂದೂ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಂದು ಬೆಳಗ್ಗೆ ಜಿಲ್ಲೆಯ ವಿವಿಧೆಡೆ ಏಕಕಾಲಕ್ಕೆ 14 ಕಡೆ ದಾಳಿ ನಡೆಸಿದ್ದಾರೆ.

ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 14 ಕಡೆಗಳಲ್ಲಿ ಎನ್ ಐ ಎ ಅಧಿಕಾರಿಗಳು ಇಂದು ಬೆಳಗ್ಗೆ ಆರು ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಮೇ 1ರಂದು ಸಂಜೆ ಸುಹಾಸ್ ಶೆಟ್ಟಿ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ  ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಕೇಂದ್ರ ಗೃಹ ಸಚಿವಾಲಯವು ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಜೂನ್ 7ರಂದು ಆದೇಶ ಹೊರಡಿಸಿತ್ತು.

Share News
Exit mobile version