ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದ ಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತನ್ನ ಹಾಗೂ ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 2025ರ ಫೆಬ್ರವರಿಯಲ್ಲಿ ಮಂಗಳೂರು ಯು.ಪಿ.ಒ.ಆರ್ ಕಚೇರಿಗೆ ಅರ್ಜಿ ಸಲ್ಲಿಸಲಾಗಿತ್ತು.
ಬಳಿಕ ಸರ್ವೆಯರ್ ನಂದೀಶ್ 2025ರ ಎಪ್ರಿಲ್‌ನಲ್ಲಿ ಸರ್ವೆ ನಡೆಸಿ ಲಂಚಕ್ಕೆ ಬೇಡಿಕೆ ಸಲ್ಲಿಸಿದ್ದರು. 6,500 ರೂ.ವನ್ನು ಸರ್ವೆಯರ್ ಸ್ವತಃ ಸ್ವೀಕರಿಸಿದ್ದಲ್ಲದೆ, 20,000 ರೂ.ವನ್ನು ದಲ್ಲಾಳಿ ಬಿಜೈಯ ದಿವಾಕರ್ ಮೂಲಕ ಪಡೆದುಕೊಂಡಿದ್ದರು.