ಉಡುಪಿ ಬ್ರಹ್ಮಾವರ : ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವುದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡಿಸುತ್ತದೆ. ತಪ್ಪಿಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಲ್ಲವರ ಮಹಾಮಂಡಲ (ರಿ) ಮೂಲ್ಕಿ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಒತ್ತಾಯಿಸಿದ್ದಾರೆ.
