ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಜುಲೈ 26ರ ಭಾನುವಾರ ಬೆಳಿಗ್ಗೆ 9:00 ಗಂಟೆಗೆ ಕದ್ರಿ ಹಿಲ್ಸ್‌ನ ಯುದ್ಧ ಸ್ಮಾರಕದಲ್ಲಿ ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಹಾಗೂ ಐತಿಹಾಸಿಕ ‘ಟಿ-55’ ಯುದ್ಧ ಟ್ಯಾಂಕ್‌ನ ಸಾರ್ವಜನಿಕ ಲೋಕಾರ್ಪಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾಜಿ ಸೈನಿಕರೂ ಆಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಪ್ರಯತ್ನದಿಂದ ಕೇಂದ್ರ ರಕ್ಷಣಾ ಸಚಿವಾಲಯದಿಂದ ಈ ಯುದ್ಧ ಟ್ಯಾಂಕ್ ಮಂಗಳೂರಿಗೆ ಮಂಜೂರಾಗಿದೆ.