ಉಡುಪಿ-ಮಂಗಳೂರು ಮೆಟ್ರೊ ರೈಲು ಯೋಜನೆ ವರದಿಗೆ ಸೂಚನೆ
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ. ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ […]