DAKSHINA KANNADA
*ಕುಂಜತ್ತಬೈಲ್ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ*
ಮಂಗಳೂರು: ಸುಮಾರು 800 ವರ್ಷಗಳ ಸುದೀರ್ಘ ಇತಿಹಾಸವಿರುವ ಕುಂಜತ್ತಬೈಲ್ ಕೊಂರ್ಗಿಬೈಲ್‌ನ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎಪ್ರಿಲ್ 7 ರಿಂದ 12 ರವರೆಗೆ ಜರುಗಲಿರುವ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ವೀಕ್ಷಿಸಿದರು. ದೇವಸ್ಥಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಜೀರ್ಣೋದ್ದಾರ ಕಾಮಗಾರಿಗಳು, ನೂತನವಾಗಿ ನಿರ್ಮಿಸಲಾಗುತ್ತಿರುವ ಭವ್ಯ ಸಭಾ ಭವನ ಹಾಗೂ ಅನ್ನ ಛತ್ರ ಸಂಕೀರ್ಣದ ಅಭಿವೃದ್ಧಿ ಕೆಲಸಗಳ ಬಗ್ಗೆ ಅವರು ಮಾಹಿತಿ […]


