Tag: ಕೆನರಾಟಿವಿನ್ಯೂಸ್‌

DAKSHINA KANNADA HOME LATEST NEWS

ಕರ್ನಾಟಕ ಬ್ಯಾಂಕ್‌ನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆ

ಮಂಗಳೂರು: ಕರ್ನಾಟಕ ಬ್ಯಾಂಕ್ ತನ್ನ ಸಿಎಸ್ಆರ್ ಫಂಡ್ ಮೂಲಕ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಕೊಡುಗೆ ನೀಡಿದೆ. ಜೂ.12 ರಂದು ಸ್ನೇಹಾಲಯದ ವೃದ್ಧರ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 10.57 ಲಕ್ಷ ರೂ. ಮೊತ್ತದ 50 ಬೆಚ್ಚಗಿನ ಕೋಟ್ಗಳು, ಹಾಸಿಗೆಗಳು, ದಿಂಬುಗಳು ಮತ್ತು 700ಕ್ಕೂ ಅಧಿಕ ಹಾಸಿಗೆ ಹೊದಿಕೆಗಳು ಹಾಗೂ ದಿಂಬು ಕವರ್‌ಗಳನ್ನು ದಾನವಾಗಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್  ವಿಶ್ವನಾಥ್ ಎಸ್.ಆರ್. ಮತ್ತು ಉಚ್ಚಿಲ ಶಾಖೆಯ ಮ್ಯಾನೇಜರ್ ಶಾಮ್ ಕುಮಾರ್ […]

HOME LATEST NEWS NATIONAL

ಪತನವಾದ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವ ಶಂಕೆ…!

ಅಹಮದಾಬಾದ್‌:  ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು, 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.   ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ 242 ಜನರಲ್ಲಿ 52 ಬ್ರಟೀಷ್‌ ಪ್ರಜೆ, ಪೋರ್ಚ್ಗಲ್‌ 6 […]

HOME LATEST NEWS UDUPI

ಭಾರೀ ಮಳೆ: ನಾಳೆ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜೂ.12ರಂದು) ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಗುರುವಾರದಿಂದ  ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ […]

DAKSHINA KANNADA HOME LATEST NEWS STATE

ಆರೋಪಿ ಬಳಿ ಹಣದ ಬೇಡಿಕೆ: ವಿಟ್ಲ ಠಾಣಾ ಎಸೈ ಸಸ್ಪೆಂಡ್‌

ವಿಟ್ಲ: ಆರೋಪಿಯೋರ್ವನ ಬಳಿ ಹಣದ ಬೇಡಿಕೆ ಮುಂದಿಟ್ಟ ಆರೋಪದಲ್ಲಿ ವಿಟ್ಲ ಠಾಣಾ ಎಸೈ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿಯಾಡುತ್ತಿದ್ದ ಬಗ್ಗೆ ದೊರೆತ ಮಾಹಿತಿಯಂತೆ ಸ್ಥಳಕ್ಕೆ ಎಸ್ಸೈ ಕೌಶಿಕ್ ದಾಳಿ ಮಾಡಿದ್ದರು. ಈ ವೇಳೆ ಜುಗಾರಿ ಆಟದಲ್ಲಿ ನಿರತರಾಗಿದ್ದವರು ಪರಾರಿಯಾಗಿದ್ದರೆ, ಸ್ಥಳದಲ್ಲಿ ಬೈಕೊಂದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕಾನೂನಾತ್ಮಕವಾಗಿ ಕ್ರಮ ಜರುಗಿಸದ ಎಸ್ಸೈ ಕೌಶಿಕ್, ಬೈಕ್ ಮಾಲಕನಿಗೆ ಕರೆ ಮಾಡಿ ಠಾಣೆಗೆ ಬರಮಾಡಿಕೊಂಡಿದ್ದಾರೆ. ಅಲ್ಲದೇ, […]

DAKSHINA KANNADA HOME LATEST NEWS

ಕಾರಿಗೆ ಬಸ್ಸು ಢಿಕ್ಕಿ: ವರ್ಕಾಡಿಯ ಯುವಕ ಕೊನೆಯುಸಿರು

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರ ರಾಗಂ ಜಂಕ್ಷನ್ ಬಳಿ ಕಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದು, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಜೂನ್ 1ರಂದು ಮೃತಪಟ್ಟಿದ್ದಾನೆ. ಮೇ 30ರಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವರ್ಕಾಡಿ ತೋಕೆ ನಿವಾಸಿಗಳಾದ ಕೆಲ್ವಿನ್ ಡಿಸೋಜ (18), ಪ್ರಜ್ವಲ್ (24), ಪ್ರೀತಂ (19) ಗಾಯಗೊಂಡಿದ್ದರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಕೆಲ್ವಿನ್ ಡಿ ಸೋಜಾ ಜೂ.1ರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಮೃತ ಕೆಲ್ವಿನ್ […]

DAKSHINA KANNADA HOME LATEST NEWS

ಭಾರಿ ಮಳೆ ಹಿನ್ನೆಲೆ: ದ.ಕ ಶಾಲೆಗಳಿಗೆ ಮೇ.31 ರಂದು ರಜೆ

ಮಂಗಳೂರು: ಕಳೆದ 24 ತಾಸುಗಳಲ್ಲಿ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದೆ. ಇದೇ ಹವಾಮಾನ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ (ಮೇ. 31ರಂದು) ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

COMMUNITY NEWS HOME LATEST NEWS

ವಿಟ್ಲ: ದೇಲಂತಬೇಟ್ಟು ಚರ್ಚ್‌ಗೆ ನೂತನ ಧರ್ಮಗುರು ಆಗಮನ- ವಂ. ಸುನೀಲ್‌ ಪಿಂಟೋಗೆ ವಿದಾಯ

ವಿಟ್ಲ: ಸಂತ ಪೌಲರ ದೇವಾಲಯ ದೇಲಂತ ಬೇಟ್ಟು ಇಲ್ಲಿಗೆ ನೂತನ ಧರ್ಮ ಗುರುಗಳಾಗಿ ಫಾದರ್ ರಿಚಾರ್ಜ್ ಡಿಸೋಜ ಅವರು ಮೇ 27 ರಂದು ಆಗಮಿಸಿದರು. ಈ ವೇಳೆ ಅವರನ್ನು ಭಕ್ತಾದಿಗಳು ಸ್ವಾಗತಿಸಿದರು. ನಿರ್ಗಮಿತ ಧರ್ಮಗುರು ವಂ. ಸುನೀಲ್‌ ಅವರು ನೂತನ ಧರ್ಮಗುರುಗಳಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮಿತ ಧರ್ಮಗುರುಗಳಿಗೆ ವಿದಾಯ ಸಂತ ಪೌಲರ ದೇವಾಲಯದಲ್ಲಿ ಆರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಧರ್ಮಗುರು ವಂ. ಸುನೀಲ್‌ ಅವರನ್ನು ಚರ್ಚ್‌ ಭಕ್ತಾಧಿಗಳು ಭಾರವಾದ ಮನಸ್ಸಿನಿಂದ ವಿದಾಯ ಹೇಳಿದರು. ಈ ವೇಳೆ ಅವರು […]

COMMUNITY NEWS HOME INETRNATIONAL LATEST NEWS

267ನೇ ಪೋಪ್‌ ಆಗಿ ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ನೇಮಕ

ವ್ಯಾಟಿಕನ್‌ ಸಿಟಿ: ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ಅವರು 267ನೇ ನೂತನ ಪೋಪ್‌ ಆಗಿ ಆಯ್ಕೆಯಾಗಿದ್ದಾರೆ. ಅವರನ್ನು ಲೀಯೋ XIV ಆಗಿ ಮರುನಾಮಕರಣ ಮಾಡಲಾಗಿದೆ. ಅಮೇರಿಕ ಮೂಲದವರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ…..     ಮತದಾನದ ವೇಳಿನ ದೃಶ್ಯ

DAKSHINA KANNADA HOME LATEST NEWS

ಉಳ್ಳಾಲದಲ್ಲಿ ಯುವತಿಯ ಗ್ಯಾಂಗ್‌ರೇ*ಪ್‌ ಆರೋಪ: ಮೂವರ ಬಂಧನ

ಮಂಗಳೂರು: ನಗರ ಹೊರವಲಯದ ಉಳ್ಳಾಲದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಧಿತ ಪ್ರಭುರಾಜ್ ಹಾಗೂ ಮಿಥುನ್ ಬಂಧಿತರನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು. ಇವರು ಮೂವರು ಸ್ನೇಹಿತರಾಗಿದ್ದು, ಮೂಲ್ಕಿ ಮೂಲದ ಪ್ರಭುರಾಜ್ ಆಟೋ ಚಾಲಕನಾಗಿದ್ದು, ಉಳ್ಳಾಲ ಕುಂಪಲದ ಮಿಥುನ್ ಎಲೆಕ್ಟ್ರೀಷಿಯನ್‌ ಆಗಿ ವೃತ್ತಿ […]

DAKSHINA KANNADA HOME LATEST NEWS

ರೈತರಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ಮಂಗಳೂರು : ರೈತರಿಗೆ ಪ್ರೋತ್ಸಾಹಧನ ನೀಡಲು ತೋಟಗಾರಿಕೆ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಠ ಅರ್ಧ ಎಕರೆಯಿಂದ 5 ಎಕರೆವರೆಗೆ ಕಾಳುಮೆಣಸು, ಕೋಕೊ, ಗೇರು, ತಾಳೆಬೆಳೆ, ರಾಂಬೂಟಾನ್, ಡ್ರಾಗನ್ ಫ್ರೂಟ್, ಮ್ಯಾಂಗೋಸ್ಟಿನ್, ತೆಂಗಿನ ತೋಟದಲ್ಲಿ ಅಂತರ ಬೆಳೆಯಾಗಿ ದಾಲ್ಚಿನ್ನಿ(ಚಕ್ಕೆ) ಬೆಳೆಗಳ ಪ್ರದೇಶ ವಿಸ್ತರಣೆಗೆ (ಹೊಸ ತೋಟ) ಶೇ 40ರ ಸಹಾಯಧನ, ಕಾಳುಮೆಣಸು ಪುನಶ್ಚೇತನಕ್ಕೆ ಶೇ 50 ಸಹಾಯಧನ, ನೀರು ಸಂಗ್ರಹಣಾ ಘಟಕಗಳ ಸ್ಥಾಪನೆಗೆ ಸಹಾಯಧನ, ಜೇನು ಸಾಕಾಣಿಕೆ ಯೋಜನೆಯಡಿ ಜೇನುಪೆಟ್ಟಿಗೆ ಹಾಗೂ ಜೇನು ಕುಟುಂಬ ಖರೀದಿಗೆ ಶೇ 75 […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678