ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್: ಯತೀಶ್ ಪೆರುವಾಯಿ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಹಂಚಿಕೊಂಡಿದ್ದ ಯುವಕನೋರ್ವನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು […]











