Tag: ಕೆನರಾಟಿವಿ ನ್ಯೂಸ್‌

DAKSHINA KANNADA HOME LATEST NEWS

ನಾಳೆ ಪುತ್ತೂರಿಗೆ ಡಿ.ಕೆ. ಶಿವಕುಮಾರ್: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫೆ.6ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 1:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಪರಾಹ್ನ 3:30ಕ್ಕೆ ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಶ್ರೀಲಕ್ಷ್ಮಿ ನಾರಾಯಣ ಸಂಗೀತ ಕಲಾ ಶಾಲೆ ವತಿಯಿಂದ ಆಯೋಜಿಸಿರುವ ನೂತನ ಸಂಗೀತ ಕಲಾ ಶಾಲೆ, ಸಭಾಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆ ಹಾಗೂ 72ನೇ ವಷರ್ದ ಕಾಂಚನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6ಕ್ಕೆ ಪುತ್ತೂರು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ನಗರದಲ್ಲಿ ವಾಸ್ತವ್ಯ […]

DAKSHINA KANNADA HOME INETRNATIONAL LATEST NEWS

ಅಬುಧಾಬಿ: ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ 45 ಕೋಟಿ ರೂ. ಗೆದ್ದ ಉಡುಪಿಯ ಶಾಂತನು ಶೆಟ್ಟಿಗಾರ್

ಅಬುಧಾಬಿ: ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿಯ ಉದ್ಯಾವರದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರ್ಹಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್‌ ಬಹುಮಾನವನ್ನು ಗೆದ್ದಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಅರೆಬಿಯನ್‌ ಡೈಲಿಯು ಸುದ್ದಿ ಪ್ರಸಾರ ಮಾಡಿದೆ. ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಅನಿವಾಸಿ ಭಾರತೀಯ ಶಾಂತನು ಶೆಟ್ಟಿಗಾರ್ ಈ ಲಾಟರಿ ಗೆದ್ದಿದ್ದಾರೆ. ಪ್ರಸ್ತುತ ಓಮನ್‌ನ ರಿಟೇಲ್ ವಲಯದಲ್ಲಿ ಕೆಲಸ ಮಾಡುತ್ತಿರುವ ಇವರು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್‌ಗೆ ‘ಸರಣಿ 283’ರ ಈ […]

DAKSHINA KANNADA HOME LATEST NEWS

ಉಪ್ಪಿನಂಗಡಿ: 20ರ ಹರೆಯದ ಯುವತಿ ನಾಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬಾಕೆ ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವಳು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಫೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹತ್ತನೇ ತರಗತಿಯ […]

DAKSHINA KANNADA HOME LATEST NEWS

ಮಂಗಳೂರು: ನಂತೂರಿನಲ್ಲಿ ಯುವತಿ ಹೊಟ್ಟೆ ಮೇಲೆ ಹರಿದ ಸಿಟಿ ಬಸ್ಸು

ಮಂಗಳೂರು: ಸಿಟಿ ಬಸ್‌ಗಳ ಅವಸರದ ವೇಗಕ್ಕೆ ಮತ್ತೊಂದು ಜೀವವೊಂದು ನಿನ್ನೆ ಬಲಿಯಾಗಿದೆ. ನಂತೂರು ಬಸ್ ಸ್ಟಾಪ್ ಬಳಿ ಸ್ಕೂಟರಿಗೆ ಹಿಂದಿನಿಂದ ಗುದ್ದಿದ ಪರಿಣಾಮ ಸಹ ಸವಾರೆಯೊಬ್ಬರ ಹೊಟ್ಟೆಯ ಮೇಲೆ ಬಸ್ಸು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ನಗರದ ಬಳ್ಳಾಲ್‌ಭಾಗ್‌ ನಿವಾಸಿ ದೀಪ್ತಿ (26) ಎಂದು ಗುರುತಿಸಲಾಗಿದೆ. ಘಟನೆ ವಿವರ ನಿನ್ನೆ ರಾತ್ರಿ ಸಮಯ ಸುಮಾರು 7-45 ಗಂಟೆಗೆ ನಂತೂರು ಬಸ್ಟ್ಯಾಂಡ್ ಬಳಿ ಬಲ್ಲಾಳ್ ಭಾಗ್ ಕಡೆಯಿಂದ ವಾಮಂಜೂರು ಕಡೆಗೆ KA- 19HT-8178 ನಂಬರ್‌ನ ಸ್ಕೂಟರ್‌ನಲ್ಲಿ […]

DAKSHINA KANNADA HOME LATEST NEWS

ಪುತ್ತೂರು: ಕಂಟೈನರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ

ಪುತ್ತೂರು: ಗೇರು ಬೀಜ ಸಾಗಣೆ ಕಂಟೈನರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪುತ್ತೂರು ತಾಲ್ಲೂಕಿನ ಮಾಡ್ನೂರು ಗ್ರಾಮದ ಕಾವು ಬುಶ್ರಾ ವಿದ್ಯಾಸಂಸ್ಥೆಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನಿರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ‍ಪಡೆಯುತ್ತಿದ್ದಾರೆ. ಪುತ್ತೂರು ಕಡೆಯಿಂದ ಮೈಸೂರು ಕಡೆಗೆ ಗೇರು ಬೀಜದ ಮೂಟೆಗಳನ್ನು ಒಯ್ಯುತ್ತಿದ್ದ ಲಾರಿಯು ಪಿಕಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಯತ್ನದಲ್ಲಿ ಹತೋಟಿ ಕಳೆದುಕೊಂಡು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ […]

HOME LATEST NEWS STATE

ತಾಯಿ ಎದೆಹಾಲು ಗಂಟಲಲ್ಲಿ ಸಿಲುಕಿ 50 ದಿನದ ಮಗು ಕೊನೆಯುಸಿರು…!

ಕಾಸರಗೋಡು: ತಾಯಿಯ ಎದೆಹಾಲು ಗಂಟಲಲ್ಲಿ ಸಿಲುಕಿ ಮಗುವೊಂದು ಮೃತಪಟ್ಟ ಘಟನೆ ಕಾಸರಗೋಡಿನ ಮೊಗ್ರಾಲ್ ಪೇರಾಲ್‌ನಲ್ಲಿ ನಡೆದಿದೆ. ಮೊಗ್ರಾಲ್ ಪೇರಾಲ್ ಮಡಿಮೊಗರು ನಿವಾಸಿ ಮುಹಮ್ಮದ್ ರಾಹಿದ್-ಮರಿಯಮ್ಮತ್ ಸಾಬಿರಾ ದಂಪತಿ ಪುತ್ರ, 50 ದಿನಗಳ ಲಸಿನ್ ಇಮಾತ್ ಮೃತಪಟ್ಟವ. ಸೋಮವಾರ ರಾತ್ರಿ ಮನೆಯಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ತಕ್ಷಣ ನಗರದ ಸರ್ಕಾರಿ ಜನರಲ್ ಆಸ್ಪತ್ರೆಗೆ ಸಾಗಿಸಿದರೂ, ಅಷ್ಟರಲ್ಲಿ ಕೊನೆಯುಸಿರೆಳೆದಿದೆ. ಒಂದೇ ರೀತಿಯ ಘಟನೆಯ ಪರಿಣಾಮ 2 ದಿನಗಳಲ್ಲಿ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ. ಭಾನುವಾರ ರಾತ್ರಿ ಬೇಕಲ […]

DAKSHINA KANNADA HOME LATEST NEWS

ಬೆಳ್ತಂಗಡಿ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಬಂದ ಇಬ್ಬರು ಅಂದರ್‌

ಬೆಳ್ತಂಗಡಿ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ನಕಲಿ ಚಿನ್ನ ಅಡವಿರಿಸಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ ಉಳಿ ಗ್ರಾಮದ ಅಬ್ದುಲ್ ನಝೀರ್ (43) ಬಂಧಿತರು. ಪ್ರಕರಣದ ವಿವರ; ದಿನಾಂಕ: 02.02.2026 ರಂದು ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ಮಡಂತ್ಯಾರು ಶಾಖೆಯಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 2 ಗ್ರಾಹಕರು ಬಂದು […]

HOME LATEST NEWS NATIONAL

ಬಾಲಿವುಡ್‌ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್‌ ನಿರ್ದೇಶಕ ಹಾಗೂ ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಮುಂಬೈನ ಜುಹುವಿನಲ್ಲಿರುವ  ಈ ಘಟನೆ ಶನಿವಾರ ರಾತ್ರಿ ನಡೆದಿದೆ. ಐದು ಸುತ್ತು ಗುಂಡು ಹಾರಿಸಲಾಗಿದೆ. ಈ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಪೊಲೀಸರು ಧೃಡಪಡಿಸಿದ್ದಾರೆ. ಸದ್ಯ ಈ  ಪ್ರಕರಣದಲ್ಲಿ ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧಿತರು ಪುಣೆಯ ನಿವಾಸಿಗಳಾಗಿದ್ದಾರೆ. ಈ ದಾಳಿಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಂಪರ್ಕ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ರೋಹಿತ್ […]

DAKSHINA KANNADA HOME LATEST NEWS STATE

ಆಂಟಿ ಜೊತೆ ಜ್ಯೋತಿಷಿ ಕಮಲಾಕರ ಭಟ್ ಅಕ್ರಮ ಸಂಬಂಧ- ಗಲಾಟೆ: ಓರ್ವನ ಮರ್ಡರ್‌

ಕಾರವಾರ: ಸಿದ್ದಾಪುರ ತಾಲ್ಲೂಕಿನ ಅವರಗೊಪ್ಪ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಸೇರಿ ಏಳು ಮಂದಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಮೃತ ವ್ಯಕ್ತಿಯನ್ನು ವಸಂತ ನಾಯ್ಕ (43) ಎಂದು ಗುರುತಿಸಲಾಗಿದೆ. ಘಟನೆ ವಿವರ ದೃಶ್ಯವಾಹಿನಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಸಿದ್ದಾಪುರ ತಾಲ್ಲೂಕು ಹೆಮ್ಮನಬೈಲ್ ಗ್ರಾಮದ, ಸದ್ಯ ಶಿವಮೊಗ್ಗದಲ್ಲಿ ವಾಸವಿರುವ ಕಮಲಾಕರ ಭಟ್, ಆತನ ಮನೆಯಲ್ಲಿ ವಾಸವಿದ್ದ ಸುಚಿತ್ರಾ ನಾಯ್ಕ, ಸುಚಿತ್ರಾಳ ತಂದೆ […]

HOME LATEST NEWS

ಮಂಜೇಶ್ವರ: ಅಪ್ಪನಿಂದಲೇ ಮಗಳ ಕೊಲೆ ಪ್ರಕರಣ- ಮತ್ತೋರ್ವ ಸಾವು

ಮಂಜೇಶ್ವರ: ತಾಲೂಕಿನ ತೂಮಿನಾಡು ಹಿಲ್ ಟಾಪ್ ಎಂಬಲ್ಲಿ ಸೋಮವಾರ ಸಂಜೆ ನಡೆದ ಕೌಟುಂಬಿಕ ಕಲಹದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ಇರಿತಕ್ಕೆ ಒಳಗಾಗಿ ಮಾರಣಾಂತಿಕ ಗಾಯಗೊಂಡಿದ್ದ ಶೇಕುಂಞಿ ಎಂಬವರು ಮಂಗಳವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಗಳ ಜೊತೆ ಆರೋಪಿ ಫಾರೂಕ್‌ ಶೇಕುಂಞಿ ಅವರ ಪತ್ನಿಯ ಅಕ್ಕನ ಮಗಳು ಜುಮೈಲಾ (17) ಸೋಮವಾರ ಸಂಜೆ ಮೃತ ಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಮೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದು, ಆತನನ್ನು […]