Tag: ಕೆನರಾಟಿವಿ ನ್ಯೂಸ್‌

LATEST NEWS

ಕಕ್ಯೆಪದವು ಲಾವಣ್ಯ ಹತ್ಯೆ: ಮೃತರ ನಿವಾಸಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ, ಸಾಂತ್ವನ

ಮಂಗಳೂರು: ಜುಲೈ 17: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ರಮಾನಾಥ ರೈ, ಮೃತರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಇಟ್ಟು ಗೌರವ ನಮನ ಸಲ್ಲಿಸಿದರು. ಬಳಿಕ ದುಃಖತಪ್ತರಾದ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, “ಈ ಅಮಾನವೀಯ ಕೃತ್ಯ ಅತ್ಯಂತ ಖಂಡನೀಯ ವಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು […]

LATEST NEWS

ಶಾಸಕ ಅಶೋಕ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ಠಾಣೆಗೆ ದೂರು

ಪುತ್ತೂರು: ಜುಲೈ 17: ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರಕಾರ ಮತ್ತು ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡಿಸುವ ರೀತಿಯಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಸಾಮಾಜಿಕ ಜಾಲತಾಣದ ವತಿಯಿಂದ ಪುತ್ತೂರು ಆರಕ್ಷಕ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರು ಸುಪ್ರೀತ್ ಕಣ್ಣಾರಾಯ ಅವರು ಈ […]

LATEST NEWS

ಅಕ್ರಮ ಬಾಂಗ್ಲಾ ವಲಸಿಗರಿಗೆ ಪಿಆರ್‌ಸಿ ಪ್ರಮಾಣಪತ್ರ ವರದಾನ: ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ

ಮಂಗಳೂರು, ಜುಲೈ 16: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 19 ಬಾಂಗ್ಲಾ ಪ್ರಜೆಗಳ ಬಂಧನವಾಗಿದ್ದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ಇಲಾಖೆಗೆ ಸಮಸ್ತ ಸಾರ್ವಜನಿಕರ ಪರವಾಗಿ ಅಭಿನಂದನೆಗಳು. ಇದು ಸಂಪೂರ್ಣವಾಗಿ ಪೊಲೀಸ್ ಇಲಾಖೆಯ ಕಾರ್ಯಾಚರಣೆಯಾಗಿದ್ದು, ಎಳ್ಳಷ್ಟೂ ರಾಜ್ಯ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅಕ್ರಮ ವಲಸಿಗರಿಗೆ ವರದಾನವಾಗಿ ಅಧಿಕೃತವಾಗಿ ಮತದಾರರ ಪಟ್ಟಿಗೆ […]

DAKSHINA KANNADA LATEST NEWS

ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ಸರಕಾರದಿಂದ ತಲಾ 5 ಲಕ್ಷ ರೂ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ದ ಕ ಜಿಲ್ಲೆಯ 23 ಕಂಬಳ ಗಳಿಗೆ ಒಟ್ಟು 1.15 ಕೋಟಿ ಬಿಡುಗಡೆಯಾಗಿದೆ. ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಳೆದ ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ವಿಧಾನಸಭಾ ಅಧಿವೇಶನದಲ್ಲೂ ಕಂಬಳಕ್ಕೆ ಸರಕಾರ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದರು. ಕರ್ನಾಟಕ ಸರಕಾರದ ಪ್ರವಾಸೋಧ್ಯಮ ಇಲಾಖೆಯ‌ಮೂಲಕ ಈ […]

DAKSHINA KANNADA HOME LATEST NEWS

ಬಿ.ಸಿ. ರೋಡ್ ಯುವತಿ ಬರ್ಬರ ಹತ್ಯೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ದಿಗ್ಭ್ರಮೆ, ಕಠಿಣ ಕ್ರಮಕ್ಕೆ ಆಗ್ರಹ

ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುವಂಥದ್ದು. ಯುವಜನತೆ […]

LATEST NEWS

ಮಾನವೀಯತೆಗೆ ಧರ್ಮದ ಎಲ್ಲೆ ಇಲ್ಲ: ಬಿರುವೆರ್ ಕುಡ್ಲ ಸಂಘಟನೆಯ ಸೇವೆಗೆ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಶ್ಲಾಘನೆ

ಮಂಗಳೂರು:ಮಾನವೀಯ ಸೇವೆಯ ಮೂಲಕ ಸಮಾಜದಲ್ಲಿ ಸಹಸ್ರಾರು ಅಸಹಾಯಕ ಕುಟುಂಬಗಳಿಗೆ ಆಸರೆಯಾಗಿರುವ ಪ್ರಮುಖ ಸಾಮಾಜಿಕ ಸಂಘಟನೆ ‘ಬಿರುವೆರ್ ಕುಡ್ಲ’ ನೇತೃತ್ವದಲ್ಲಿ, ಅದರ ದುಬಾಯಿ ಘಟಕದ ವಿಶೇಷ ಸಹಯೋಗದೊಂದಿಗೆ ಮಂಗಳೂರಿನ ಇಬ್ಬರು ನೊಂದ ಸಂತ್ರಸ್ತರಿಗೆ ಒಟ್ಟು ₹1,65,000 ಆರ್ಥಿಕ ನೆರವನ್ನು ವಿತರಿಸಲಾಯಿತು. ನಗರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ₹55,000 ಹಾಗೂ ಗಂಭೀರ ಕಾಯಿಲೆಯಿಂದ ಹೋರಾಡುತ್ತಿರುವ ದುರ್ಗಾಪ್ರಸಾದ್ ಅವರ ವೈದ್ಯಕೀಯ ಚಿಕಿತ್ಸೆಗಾಗಿ ₹1,10,000 ಸಹಾಯ ಧನದ ಚೆಕ್‌ಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ […]

DAKSHINA KANNADA HOME LATEST NEWS

ನಾಗೋರಿ ಭೂಕುಸಿತ, ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಎಂಎಲ್‌ಸಿ ಎಸ್.ಎಲ್. ಭೋಜೆಗೌಡ ಭೇಟಿ: ಶಾಶ್ವತ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು, ಜುಲೈ 16: ರಾಜ್ಯದಲ್ಲಿ ಮುಂಗಾರು ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಅಧ್ಯಯನಕ್ಕಾಗಿ ರಚಿಸಲಾದ ಜನತಾದಳ (ಜಾತ್ಯತೀತ) ಅಧ್ಯಯನ ತಂಡದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರು ಎಸ್.ಎಲ್. ಭೋಜೆಗೌಡ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವಿಕೋಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬೆಳಿಗ್ಗೆ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ,ಯುವ ಘಟಕ ಜಿಲ್ಲಾದ್ಯಕ್ಷ ಅದ್ಯಕ್ಷರಾದ ಅಕ್ಷಿತ್ ಸುವರ್ಣ, ಜಿಲ್ಲಾ ಮಹಾ ಪ್ರಧಾನ […]

DAKSHINA KANNADA HOME LATEST NEWS

ರಾಮಮಂದಿರದ ಹುಂಡಿ ಕಳವು ಪ್ರಕರಣ: ಆರೆಸ್ಸೆಸ್, ವಿಎಚ್‌ಪಿ, ಬಿಜೆಪಿ ವಿರುದ್ಧ ವಿನಯ್ ಕುಮಾರ್ ಸೊರಕೆ ಕಿಡಿ

ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್, ವಿಎಚ್ ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪ್ರಕರಣದ ಬಗ್ಗೆ ಐಟಿ, ಇಡಿ, ಸಿಬಿಐ ಮೌನವಾಗಿವೆ. ತಾನೋರ್ವ ಚೌಕಿದಾರ್ ಎನ್ನುವ ಪ್ರಧಾನಿ ಮೋದಿಯವರು ನೇಮಿಸಿದ ಉಪಚೌಕಿದಾರ ಟ್ರಸ್ಟಿಗಳಿಂದಲೇ ಕಳವು […]

DAKSHINA KANNADA LATEST NEWS

*ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ*

ಮಂಗಳೂರು, ಜು.15:-ನಾಗರೀಕರು ಚುನಾವಣೆ ಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಹೇಳಿದ್ದಾರೆ. ಅವರು ಬುಧವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್.ಐ.ಆರ್) ಕುರಿತು ವಿಶೇಷ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದತ್ತ ಅಧಿಕಾರವಾಗಿರುವ ಮತದಾನವು ಪ್ರಜೆಗೆ ದೊರೆತಿರುವ ಅತ್ಯುನ್ನತ ಅಧಿಕಾರವಾಗಿದೆ. ತನ್ನ ಆಯ್ಕೆಯ ಸರಕಾರವನ್ನು ಚುನಾಯಿಸಲು ಮತದಾರರು […]

HOME LATEST NEWS STATE

*ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್*

ಬೆಂಗಳೂರು, ಜು.15:”ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ‌” ಎಂದು ಸಿಎಂ‌ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನೆಹರು ತಾರಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. […]