ಛತ್ತೀಸ್ಗಡ: ಮತಾಂತರ ಆರೋಪದಲ್ಲಿ ಬಂಧಿತರಾಗಿದ್ದ ಕ್ರೈಸ್ತ ಸನ್ಯಾಸಿನಿಯರಿಗೆ ಜಾಮೀನು
ರಾಯ್ಪುರ್: ಆದಿವಾಸಿಗಳನ್ನು ಮತಾಂತರಗೊಳಿಸಿ, ಅವರನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಇಬ್ಬರು ಕ್ರೈಸ್ತ ಸನ್ಯಾಸಿನಿಯರಿಗೆ ಎನ್ಐಎ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಶುಕ್ರವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಎನ್ಐಎ ನ್ಯಾಯಾಲಯ) ಸಿರಾಜುದ್ದೀನ್ ಖುರೇಷಿ, ತಮ್ಮ ತೀರ್ಪನ್ನು ಕಾಯ್ದಿರಿಸಿದ್ದರು.ಶನಿವಾರ ತೀರ್ಪು ಪ್ರಕಟಿಸಿದ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯ, ಕೇರಳದ ಇಬ್ಬರು ಕ್ರೈಸ್ತ ಸನ್ಯಾಸಿನಿಯರಿಗೆ ಹಾಗೂ ಛತ್ತೀಸ್ ಗಢದ ಓರ್ವ ಆದಿವಾಸಿ ಯುವಕನಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ […]











