ಕ್ರೈಸ್ತ ಸನ್ಯಾಸಿಯರ ಬಂಧನ ಖಂಡಿಸಿ ಆ.4ರಂದು ಕಥೋಲಿಕ್ ಸಭಾದಿಂದ ಬೃಹತ್ ಪ್ರತಿಭಟನೆ
ಮಂಗಳೂರು: ಛತ್ತೀಸ್‌ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರನ್ನು ಮತಾಂತರ ಆರೋಪ ಹೊರಿಸಿ ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಆ.4 ರಂದು ಮಂಗಳೂರಿನಲ್ಲಿ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ) ಇದರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ಸಂತೋಷ್ ಡಿಸೋಜಾ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶಾದ್ಯಂತ ಕ್ರೈಸ್ತ ಧರ್ಮಗುರುಗಳು, ಧರ್ಮ ಭಗಿನಿಯರು ಹಾಗೂ ಕ್ರೈಸ್ತ ಸಮುದಾಯದವರು ಶಾಂತಿ ಪ್ರಿಯರಾಗಿದ್ದು ದೇಶ ಭಕ್ತಿಯನ್ನು ಹೊಂದಿದವರಾಗಿರುತ್ತಾರೆ. […]











