ಜಿಲ್ಲಾಧಿಕಾರಿಗೆ ತಾವೇ ಬೆಳೆದ ತರಕಾರಿ ನೀಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ತಾವು ತಮ್ಮ ಶಾಲೆಯ ಆವರಣದಲ್ಲಿ ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು. ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ […]