ನಿಶ್ಛಿತಾರ್ಥವಾಗಿದ್ದಾತೆಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದವನ ಬರ್ಬರ ಹತ್ಯೆ
ಚಿಕ್ಕಮಗಳೂರು: ಬೇರೊಬ್ಬನೊಂದಿಗೆ ನಿಶ್ಛಿತಾರ್ಥವಾಗಿದ್ದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಯುವಕನನ್ನು ಯುವತಿಯ ಭಾವಿ ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ […]










