ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನಾಚರಣೆ
ಮಂಗಳೂರು. ಡಿ.06 : ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನಾಚರಣೆ ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಮಹಾನ್ ಧೀಮಂತ ನಾಯಕ. ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಿ ಭಾರತವನ್ನು ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯಲು ಶ್ರಮಿಸಿದರು. ನಾವು ಅವರ ತತ್ವಾದರ್ಶ, ಸಿದ್ಧಾಂತವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ […]



