LATEST NEWS
ಪದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ನಲ್ಲಿ ‘ಉತ್ಕರ್ಷ–2026’
ಮಂಗಳೂರು: ಪದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಹೊಸದಾಗಿ ದಾಖಲಾದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಉತ್ಕರ್ಷ–2026’ ಪರಿಚಯಾತ್ಮಕ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಐಸಿಎಫ್ ಸಿಸಿಇ ಪ್ರಮಾಣೀಕೃತ ತರಬೇತುದಾರ, ಅಕ್ಷಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ನಿರ್ದೇಶಕ ಹಾಗೂ ಅಭಿಜ್ಞಾ ಎಜುಕೇಶನ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಅಭಿಲಾಷ್ ಕ್ಷತ್ರಿಯ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, “ಇಂದಿನ ಜನರೇಷನ್ ಜಡ್ (Gen […]


