Tag: ಮಂಗಳೂರು ನಗರ ಪೊಲೀಸ್‌

DAKSHINA KANNADA HOME LATEST NEWS

ನೇಪಾಳದಲ್ಲಿ ಕುಳಿತು Investment fraud ಮೂಲಕ ವಂಚಿಸುತ್ತಿದ್ದವರ ಬಂಧನ

ಮಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿಯನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಗುಜರಾತ್‌ನ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್‌ನ ಪುಪ್ಲ ಶಿವಕುಮಾರ್ ರಾವ್ (32) ಮತ್ತು ರಾಜೇಶ್ ಮಂಡನ್ (30), ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶದ ಗೌರವ್ ಪಾಂಡೆ (24) ಮತ್ತು […]

DAKSHINA KANNADA HOME LATEST NEWS

ನಂತೂರಿನಲ್ಲಿ ಅಪಘಾತ ಪ್ರಕರಣ: ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ದ FIR- ಕಮೀಷನರ್‌

ಮಂಗಳೂರು: ನಗರದ ನಂತೂರಿನಲ್ಲಿ ಬಸ್ಸು ಚಾಲಕನ ಬೇಜವಾಬ್ದಾರಿಯಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಖಾಸಗಿ ಬಸ್ಸುಗಳ ಓಡಾಟದ ಧಾವಂತಕ್ಕೆ ಒಂದು ಜೀವ ಹೋಗಿದೆ. ಆರೋಪಿ ಬಸ್ಸು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ಆಗುತ್ತಿದೆ ಎಂದರು. ಇನ್ನು ಮೃತಳ ಪಾರ್ಥೀವ ಶರೀರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ. ಎಲ್ಲವೂ ಕಾನೂನುಬದ್ಧವಾಗಿಯೇ ಆಗುತ್ತದೆ. ನಿರ್ಲಕ್ಷ್ಯಕ್ಕೆ ಏನು ಶಿಕ್ಷೆ […]

DAKSHINA KANNADA HOME LATEST NEWS

ಮಂಗಳೂರು: ನಂತೂರಿನಲ್ಲಿ ಯುವತಿ ಹೊಟ್ಟೆ ಮೇಲೆ ಹರಿದ ಸಿಟಿ ಬಸ್ಸು

ಮಂಗಳೂರು: ಸಿಟಿ ಬಸ್‌ಗಳ ಅವಸರದ ವೇಗಕ್ಕೆ ಮತ್ತೊಂದು ಜೀವವೊಂದು ನಿನ್ನೆ ಬಲಿಯಾಗಿದೆ. ನಂತೂರು ಬಸ್ ಸ್ಟಾಪ್ ಬಳಿ ಸ್ಕೂಟರಿಗೆ ಹಿಂದಿನಿಂದ ಗುದ್ದಿದ ಪರಿಣಾಮ ಸಹ ಸವಾರೆಯೊಬ್ಬರ ಹೊಟ್ಟೆಯ ಮೇಲೆ ಬಸ್ಸು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ನಗರದ ಬಳ್ಳಾಲ್‌ಭಾಗ್‌ ನಿವಾಸಿ ದೀಪ್ತಿ (26) ಎಂದು ಗುರುತಿಸಲಾಗಿದೆ. ಘಟನೆ ವಿವರ ನಿನ್ನೆ ರಾತ್ರಿ ಸಮಯ ಸುಮಾರು 7-45 ಗಂಟೆಗೆ ನಂತೂರು ಬಸ್ಟ್ಯಾಂಡ್ ಬಳಿ ಬಲ್ಲಾಳ್ ಭಾಗ್ ಕಡೆಯಿಂದ ವಾಮಂಜೂರು ಕಡೆಗೆ KA- 19HT-8178 ನಂಬರ್‌ನ ಸ್ಕೂಟರ್‌ನಲ್ಲಿ […]

DAKSHINA KANNADA HOME LATEST NEWS

ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರಂಟ್ ಜಾರಿ ಸಿಬ್ಬಂದಿ ಬಂಧಿಸಿದ್ದಾರೆ. ತೊಕ್ಕೊಟ್ಟು ನಿವಾಸಿ ನವೀನ್ ಸಿಕ್ವೇರಾ (52)ಬಂಧಿತ ಆರೋಪಿ. 2011–12ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಸಂಖ್ಯೆ 195/2011, ಕಲಂ 392 ಐಪಿಸಿ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015ರಲ್ಲಿ ಆರೋಪಿಗೆ ಮೂರು ವರ್ಷಗಳ ಕಠಿಣ ಸೆರೆವಾಸ ಮತ್ತು 5,000 ರೂ. […]

DAKSHINA KANNADA HOME LATEST NEWS

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: ಓರ್ವನ ಬಂಧನ

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪದವು ಗ್ರಾಮದ ಕೈಲಾಸ ಕಾಲನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಬಳಿ […]

DAKSHINA KANNADA HOME LATEST NEWS

ಮಂಗಳೂರು: ಅಪಘಾತದಲ್ಲಿ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ₹ 70 ಲಕ್ಷ ರೂ. ಆರ್ಥಿಕ ನೆರವು

ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು, ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಪೊಲೀಸ್ ಸಿಬ್ಬಂದಿ ದಿವಂಗತ  ಹರೀಶ್ ಜಿ. ಎನ್. ಅವರ ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು ನೀಡಿದೆ. ಬ್ಯಾಂಕಿನ ಈ ಬೆಂಬಲ ಉಪಕ್ರಮದ ಭಾಗವಾಗಿ, ಮೃತರ ಕುಟುಂಬಕ್ಕೆ ₹ 70 ಲಕ್ಷ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರ್ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ […]

DAKSHINA KANNADA HOME LATEST NEWS

ಇಂದು ಮಂಗಳೂರಿಗೆ CM & DCM: ಸಂಚಾರ ವ್ಯತ್ಯಯ ಸಾಧ್ಯತೆ

ಮಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲ ಮತ್ತು ನರಿಂಗಾನ ಹಾಗೂ ಅಂಬ್ಲಮೊಗರುವಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇವರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು. ಹಾಗಾಗಿ ಸುಗಮ ಸಂಚಾರದ ದೃಷ್ಟಿಯಿಂದ ತುರ್ತು ಸಂದರ್ಭ ಹೊರತುಪಡಿಸಿ ಈ ಮಾರ್ಗಗಳಲ್ಲಿ ಸಂಚರಿಸದೆ ಬದಲಿ ಮಾರ್ಗ ಉಪಯೋಗಿಸು ವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ಸಂಚಾರ ದಟ್ಟಣೆಯಾಗುವ ಮಾರ್ಗಗಳು: ಕೆಂಜಾರು ಜಂಕ್ಷನ್, ಮರವೂರು, ಕಾವೂರು, ಬೋಂದೆಲ್, ಪದವಿನಂಗಡಿ, […]

DAKSHINA KANNADA HOME LATEST NEWS

ಡ್ಯೂಟಿಯಲ್ಲಿದ್ದ ಮಂಗಳೂರು ಟ್ರಾಫಿಕ್‌ ಪೊಲೀಸರ ಬೈಕ್‌ ಕಳ್ಳತನ: ಅರ್ಧ ಗಂಟೆಯ ಕೈಚಳಕ

ಮಂಗಳೂರು: ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸರೊಬ್ಬರು ಪಾರ್ಕ್‌ ಮಾಡಿದ ಅರ್ಧಗಂಟೆಯೊಳಗೆ ಬೈಕು ಕಳವು ನಡೆಸಿದ ಬಗ್ಗೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಪುನೀತ್‌ ಬಿ.ವೈ ಎಂಬುವವರು ಮಂಗಳೂರು ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಜ.5 ರಂದು ಮಂಗಳೂರು ಕೆ.ಬಿ.ಕಟ್ಟೆಯಲ್ಲಿ ಸಂಚಾರ ನಿಯಂತ್ರಣ  ಕರ್ತವ್ಯಕ್ಕೆ ನೇಮಿಸಿದಂತೆ ಸಂಜೆ 5:30 ಗಂಟೆಗೆ ತನ್ನ ತಂದೆಯ ಹೆಸರಿನಲ್ಲಿರುವ KA-13-EG 3008  ನೋಂದಣಿಯ ಹೋಂಡಾ ಶೈನ್‌ […]

DAKSHINA KANNADA HOME LATEST NEWS

ಅಕ್ರಮ ದನದ ಮಾಂಸ ಸಾಗಾಟ: ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ- ಪ್ರತ್ಯೇಕ FIR

ಮಂಗಳೂರು:  ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಹಾಗೂ ಅದನ್ನು ತಡೆದು ನಿಲ್ಲಿಸಿದ ಪ್ರಕರಣದ ಬಗ್ಗೆ ಜೊತೆಗೆ ಇದೇ ಹಿನ್ನೆಲೆ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಘಟನೆ ವಿವರ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಡಿ.27 ರಂದು  ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬಾತನು ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ […]

DAKSHINA KANNADA HOME

ತಣ್ಣೀರುಬಾವಿ ಬೀಚ್‌ನಲ್ಲಿ ಇಂದು-ನಾಳೆ ಮ್ಯೂಸಿಕ್ ಫೆಸ್ಟಿವಲ್: ಪೊಲೀಸರಿಂದ ಸಂಚಾರಿ ಸಲಹೆ

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ  ಜ.3 ಹಾಗೂ 4 ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುತ್ತದೆ. ಸದರಿ ಕಾರ್ಯಕ್ರಮಗಳಿಗೆ  ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವವರಿದ್ದು, ಈ ಸಮಯ ಕೊಟ್ಟಾರಚೌಕಿ – ಪಣಂಬೂರು ರಾಷ್ಟ್ರೀಯ ಹೆದ್ದಾರಿ ಮತ್ತು ತಣ್ಣೀರುಬಾವಿ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುತ್ತದೆ. ಮೇಲಿನ ಕಾರ್ಯಕ್ರಮಗಳು ನಡೆಯುವ […]