Tag: ಮಂಗಳೂರು

DAKSHINA KANNADA HOME LATEST NEWS

ಪುತ್ತೂರು ಜಾತ್ರೆ ಪ್ರಯುಕ್ತ-ಸಂಚಾರ ಮಾರ್ಗ ಬದಲಾವಣೆ

ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ ಎಪ್ರಿಲ್ 16 ಮತ್ತು 17 ರಂದು ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ. ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ […]

DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರಿಂದ ‘ಗರಿಗಳ ಭಾನುವಾರ’ ಆಚರಣೆ

ಮಂಗಳೂರು: ಇಂದು ಗರಿಗಳ ಭಾನುವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಭಾನುವಾರ ಆರಂಭಗೊಂಡಿದೆ. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಏ.13 (ಇಂದು) ಕ್ರೈಸ್ತರು ಭಾನುವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರದ ಮಿಲಾಗ್ರಿಸ್‌ ಚರ್ಚ್‌ನಲ್ಲಿ ನಡೆದ ಮೆರವಣಿಗೆ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆ ಮೇಲೆ ಚಲಿಸಿದ ಕಾರು….!

ಮಂಗಳೂರು: ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆಯ ಮೇಲೆ ಕಾರೊಂದು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದ ಬಿಜೈ ಕಾಪಿಕಾಡ್‌ನಲ್ಲಿ ನಡೆದಿದೆ. ಘಟನೆ ವಿವರ ನಿಂಗಪ್ಪ ಎಂಬವರು ನಗರದ ಬಿಜೈ ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದು,  ಏ.9 ರಂದು ಅಪಾರ್ಟ್ ಮೆಂಟಿನ ಮುಖ್ಯಗೇಟಿನ ಬಲ ಬದಿಯಲ್ಲಿ ಕಸ ಹೆಕ್ಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಜೊತೆಯಲ್ಲಿ ತನ್ನ (1 ½) ವರ್ಷದ ಮಗು ಬೇಬಿ ಪ್ರಜ್ವಲ್ ಹರಿಜನ ಎಂಬವನು ಆಚೆ […]

DAKSHINA KANNADA HOME LATEST NEWS STATE UDUPI

ಉಡುಪಿ-ಮಂಗಳೂರು ಮೆಟ್ರೊ ರೈಲು ಯೋಜನೆ ವರದಿಗೆ ಸೂಚನೆ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ. ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ […]

COMMUNITY NEWS DAKSHINA KANNADA HOME LATEST NEWS

ಪೆಜಾರ್ ಸಂತ ಜೋಸಫ್‌ ಚರ್ಚ್‌ನಲ್ಲಿ ಏ.15ರಂದು 241 ನೇ “ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ”

ಮಂಗಳೂರು: ಪ್ರಭು ಏಸುವಿನ ಜನನದ ಜುಬಿಲಿ ವರ್ಷದ ಪ್ರಯುಕ್ತ ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ ಕಳವಾರು ಪೆಜಾರ್ ಸಂತ ಜೋಸಫರಿಗೆ ಸಮರ್ಪಿಸಿದ ಚರ್ಚಿನಲ್ಲಿ ಈ ಬಾರಿ 241 ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ ಏ.15 ರಂದು ನಡೆಯಲಿದೆ ಎಂದು ಚರ್ಚ್‌ನ ಧರ್ಮಗುರು ವಂ.ಲಾರೆನ್ಸ್‌ ರೊನಾಲ್ಡ್‌ ಡಿಸೋಜ ಅವರು ತಿಳಿಸಿದರು. ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ಮಾಹಿತಿ ನೀಡಿದ ಅವರು, 240 ವರ್ಷಗಳ ಹಿಂದೆ ಬೂದಿ ಬುಧವಾರ (ash wednesday) ದಂದು ಪ್ರಾರಂಭಗೊಂಡು ನಿರಂತರವಾಗಿ ನಡೆಯುತ್ತಾ ಬಂದ ಪವಿತ್ರ […]

DAKSHINA KANNADA HOME LATEST NEWS

ಇಂದು ಸುರತ್ಕಲ್‌, ಕೃಷ್ಣಾಪುರ ಸೇರಿ ಹಲವೆಡೆ ವಿದ್ಯುತ್‌ ನಿಲುಗಡೆ

ಮಂಗಳೂರು: ಸುರತ್ಕಲ್ ಇಂಡಸ್ಟ್ರಿಯಲ್ ಫೀಡರ್ ಹಾಗೂ ಕಾಟಿಪಳ್ಳ ಉಪಕೇಂದ್ರದ ವ್ಯಾಪ್ತಿಯ ಪ್ರದೇಶಗಳಲ್ಲಿ ಎ.10ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಸುರತ್ಕಲ್, ಕಾನ, ಕಟ್ಲ, ತಡಂಬೈಲ್, ಮುಂಚೂರು, ಮುಕ್ಕ, ಸಸಿಹಿತ್ಲು, ಚೇಳ್ಯಾರು, ಮಧ್ಯ, ಕೃಷ್ಣಾಪುರ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್, 5ನೇ ಬ್ಲಾಕ್, 6ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್ ಕೃಷ್ಣಾಪುರ, ಚೊಕ್ಕಬೆಟ್ಟು, ಕೋಟೆ, ಕುತ್ತೆತ್ತೂರು, ಆದರ್ಶನಗರ, ರಾಜೀವನಗರ, ಸೂರಿಂಜೆ, ಶಿಬರೂರು, ಬಾಳ, ಮಂಗಳಪೇಟೆ, ಹಾಗೂ ಸುತ್ತಮುತ್ತಲಿನಪ್ರದೇಶಗಳಲ್ಲಿ ವಿದ್ಯುತ್ […]

DAKSHINA KANNADA HOME LATEST NEWS

ಎ. 11 ರಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು:   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಎ. 11 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ  2:55 – ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:30 – ಉಳ್ಳಾಲ ದರ್ಗಾ ಆವರಣದಲ್ಲಿ  ಉಳ್ಳಾಲ ದರ್ಗಾ  ಉರೂಸ್ ಕುರಿತು ಪೂರ್ವಭಾವಿ ಸಭೆ. ಸಂಜೆ 4:30 –  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ನೂತನ ಶವಗಾರ ಕಟ್ಟಡ,  […]

HOME LATEST NEWS NATIONAL

ಅಡುಗೆ ಅನಿಲದ ದರ ಏರಿಸಿದ ಕೇಂದ್ರ: 50 ರೂ. ಹೆಚ್ಚಳ

ಮಂಗಳೂರು: ದಿನನಿತ್ಯದ ವಸ್ತುಗಳ ದರ ಹೆಚ್ಚಳದ ನಡುವೆಯೇ ಅಡುಗೆ ಅನಿಲದ ದರವನ್ನು 50 ರೂಪಾಯಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಇದು ಸಾಮಾನ್ಯ ಸಿಲಿಂಡ‌ರ್ ಜತೆ ಉಜ್ವಲಾ ಯೋಜನೆಗೂ ಅನ್ವಯವಾಗಲಿದೆ. ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ. ಅಡುಗೆ ಅನಿಲದ ದರವನ್ನು ಉಜ್ವಲಾ ಯೋಜನೆ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಹೆಚ್ಚಿಸಲಾಗಿದೆ. ಹೊಸ ದರದ ಅನ್ವಯ 14.2 ಕೇಜಿ ಅಡುಗೆ ಅನಿಲದ ದರ […]

HOME LATEST NEWS NATIONAL

ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ: ಬಿಜೆಪಿ ನಾಯಕನ ಮನೆಗೆ ಬೆಂಕಿ

ಇಂಫಾಲ್‌: ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲಿಸಿದ ಆರೋಪದ ಮೇಲೆ, ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷನ ಮನೆಗೆ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ. ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಸ್ಕರ್‌ ಅಲಿ ಮನೆಗೆ ಗುಂಪೊಂದು ಭಾನುವಾರ ರಾತ್ರಿ ದಾಳಿ ಮಾಡಿ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯು ಥೌಬಾಲ್‌ ಜಿಲ್ಲೆಯ ಲಿಲೊಂಗ್ ಎಂಬಲ್ಲಿ ನಡೆದಿದೆ. ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿ ಅಸ್ಕರ್‌ ಅಲಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ […]

COMMUNITY NEWS DAKSHINA KANNADA HOME LATEST NEWS

ವಿಟ್ಲ: ಫಾತಿಮಾ ಮಾತಾ ದೇವಾಲಯದಲ್ಲಿ ಶಿಲುಬೆ ಯಾತ್ರೆ

ಬಂಟ್ವಾಳ: ತಾಲೂಕಿನ ವಿಟ್ಲದ ಪೆರುವಾಯಿಯ ಫಾತಿಮಾ ಮಾತಾ ದೇವಾಲಯದಲ್ಲಿ ಶಿಲುಬೆ ಯಾತ್ರೆಯು (ಖುರ್ಸಾವಾಟ್‌) ಇಂದು ನಡೆಯಿತು. ಮೊದಲು ನಡೆದ ಬಲಿಪೂಜೆಯನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಾಸ್ಟೆಲ್‌ ವಾರ್ಡನ್‌ ವಂ. ರೂಪೇಶ್‌ ತಾವ್ರೊ ನೆರವೇರಿಸಿದರು. ನಂತರ ಚರ್ಚ್‌ ಆವರಣದಿಂದ ನಡೆದ ಶಿಲುಬೆ ಯಾತ್ರೆಯು ಸರಿಸುಮಾರು 2 ಕೀ.ಮೀ ಸಾಗಿ ತಾಬೋರ್‌ ಪರ್ವತ (ಗುಡ್ಡ ಪ್ರದೇಶ)ದಲ್ಲಿ ಸಂಪನ್ನಗೊಂಡಿತು. ಈ ವೇಳೆ ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ಮೊದಲ್ಗೊಂಡು ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ […]