Tag: ಮಂಗಳೂರು

DAKSHINA KANNADA HOME LATEST NEWS

ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌ವಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

DAKSHINA KANNADA

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಇಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ […]

DAKSHINA KANNADA HOME LATEST NEWS

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿ ನೇಣಿಗೆ ಶರಣು..!

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ. ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ […]

DAKSHINA KANNADA HOME LATEST NEWS

ಯೆಯ್ಯಾಡಿಯಲ್ಲಿ ಚೂರಿ ಇರಿತಕ್ಕೊಳಗಾದ ಯುವಕ ಸಾ*ವು

ಮಂಗಳೂರು: ಜೂನ್ 6ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಕೌಶಿಕ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರೆಂದು ತಿಳಿದು ಬಂದಿದೆ. ಜೂ.6ರಂದು ಯೆಯ್ಯಾಡಿಯ ಬಾರೊಂದರ ಬಳಿ ಜಗಳ ನಡೆದು ಬಿಜೈ ನಿವಾಸಿ ಬ್ರಿಜೇಶ್ ಶೆಟ್ಟಿ ಎಂಬಾತ ಕೌಶಿಕ್‌ ಗೆ ಚೂರಿ ಇರಿದಿದ್ದ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಕೌಶಿಕ್‌ ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೌಶಿಕ್‌ ಇಂದು ಆಸ್ಪತ್ರೆಯಲ್ಲಿ ಮತಪಟ್ಟರೆಂದು ತಿಳಿದು ಬಂದಿದೆ. ಈ ದಾಳಿ […]

DAKSHINA KANNADA HOME LATEST NEWS

ಅಹಮದಾಬಾದ್‌ ವಿಮಾನ ದುರಂತ: ಮಂಗಳೂರು ಬಿಷಪ್ ದಿಗ್ಭ್ರಮೆ, ಸಂತಾಪ

ಮಂಗಳೂರು: ಗುಜರಾತಿನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಅಪಾರ ಸಾವು ನೋವು ಸಂಭವಿಸಿದ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಅವರು ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಮೃತ ಪಟ್ಟವರ ಆತ್ಮಗಳಿಗೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

DAKSHINA KANNADA HOME LATEST NEWS

ವಿಮಾನ ಅಪಘಾತ: ಮಂಗಳೂರು ಮೂಲದ ಕೋ ಪೈಲಟ್‌ ನಿಧನ

ಅಹಮದಾಬಾದ್: ಇಂದು ಮಧ್ಯಾಹ್ನ ನಡೆದ ವಿಮಾನ ಅಪಘಾತದಲ್ಲಿ ಮಂಗಳೂರು ಮೂಲದ ಸಹ ಪೈಲೆಟ್ ಕ್ಲೈವ್ ಕುಂದರ್ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ಕ್ಲೈವ್ ಕುಂದರ್ ಮುಂಬೈನಲ್ಲಿ ವಾಸಿಸುತ್ತಿದ್ದರು. ಇದರ ಜೊತೆಗೆ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ‌ ಸಾವನ್ನಪ್ಪಿರುವುದು ಖಚಿತವಾಗಿದೆ.

DAKSHINA KANNADA HOME LATEST NEWS

ಸುಹಾಸ್‌ ಶೆಟ್ಟಿ ಮನೆಯವರು ಕರೆದರೆ ಅವರ ಮನೆಗೂ ಹೋಗುತ್ತೇನೆ: ಸ್ಫೀಕರ್‌ ಖಾದರ್‌

ಮಂಗಳೂರು: ಸುಹಾಸ್‌ ಶೆಟ್ಟಿ ಮನೆಯವರು ಕರೆದರೆ ಅವರ ಮನೆಗೂ ಹೋಗುತ್ತೇನೆ ಹಾಗೂ ಅಬ್ದುಲ್‌ ರೆಹಮಾನ್‌ ಕೊಲೆ ತನಿಖೆಯನ್ನು ಎನ್‌ಐಗೆ ವಹಿಸುವಂತೆ ಆತನ ಮನೆಯವರು ಕೇಳಿದರೆ ರಾಜ್ಯ ಸರ್ಕಾರ ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ ಎಂದು ವಿಧಾನಸಭಾ ಸ್ಪೀಕರ್‌ ಯು.ಟಿ ಖಾದರ್‌ ಹೇಳಿದ್ದಾರೆ. ಪವಿತ್ರ ಹಜ್‌ ಯಾತ್ರೆಯಿಂದ ಮರಳಿದ ನಂತರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ನಗರದ ಸೌರ್ಕ್ಯೂಟ್‌ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬ್ದುಲ್‌ ರೆಹಮಾನ್‌ ಮನೆಯವರು ಕೊಲೆಯಾದ ದಿನವೇ ನನಗೆ ದೂರವಾಣಿ ಮೂಲಕ ಮಾಹಿತಿ […]

COMMUNITY NEWS HOME INETRNATIONAL LATEST NEWS

ಇಂದು ಪೋಪ್‌ ಅಂತ್ಯಕ್ರಿಯೆ: ನೇರಪ್ರಸಾರ ಎಲ್ಲಿ; ಸಂಪೂರ್ಣ ವಿವರ ಇಲ್ಲಿದೆ…

ರೋಮ್‌: ಐದು ದಿನಗಳ ಹಿಂದೆ (ಏ. 21)ರಂದು ನಿಧನರಾಗಿದ್ದ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಇಂದು ವ್ಯಾಟಿಕನ್ ಸಿಟಿಯಲ್ಲಿ ಜರುಗಲಿದೆ. ಪೋಪ್ ಅವರು ಬದುಕಿದ್ದಾಗ ತಮ್ಮ ಅಂತ್ಯಕ್ರಿಯೆಯನ್ನು ವ್ಯಾಟಿಕನ್ ಸಿಟಿಯ ಸೇಂಟ್ ಮರಿಯಾ ಮಗೊಯ್ರ್ ನ ಆವರಣದಲ್ಲಿ ನೆರವೇರಿಸಬೇಕು ಎಂದು ಕೋರಿದ್ದರಂತೆ. ಹಾಗಾಗಿ, ಅಂತಿಮ ಇಚ್ಛೆಯನ್ನು ಪೂರೈಸುವ ಸಲುವಾಗಿ ಸಂತ ಮರಿಯಾ ಮಗೊಯ್ರ್ ನಲ್ಲೇ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಭಾರತೀಯ ಕಾಲಮಾನ ಇಂದು (ಏ. 26ರಂದು) ಮಧ್ಯಾಹ್ನ 1.30ರ ಸುಮಾರಿಗೆ ಆರಂಭವಾಗುವ ಅಂತಿಮ […]

COMMUNITY NEWS LATEST NEWS

ಮಂಗಳೂರು: MCC ಬ್ಯಾಂಕ್‌ನಿಂದ ಪೋಪ್ ಫ್ರಾನ್ಸಿಸ್‌ಗೆ ಗೌರವ ನಮನ

ಮಂಗಳೂರು: ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಛೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದಿನಾಂಕ ಏ.24 ರಂದು ಬ್ಯಾಂಕಿನ ಆಡಳಿತ ಕಛೇರಿಯಲ್ಲಿ ನಡೆಯಿತು. ಶ್ರೀಮತಿ ಕ್ಯಾರೆನ್ ಕ್ರಾಸ್ತಾ ತಂಡದಿಂದ ಪ್ರಾರ್ಥನಾ ಗೀತೆಯೊಂದಿಗೆ ಸಭೆ ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ಫಾ. ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನೀರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಹಾಜರಿದ್ದರು. ವಂ. ಪೌಸ್ತಿನ್ ಲೋಬೊ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿ ಅವರು ಹಲವಾರು ಸಂದರ್ಭಗಳಲ್ಲಿ ಪೋಪ್ ಆವರೊಂದಿಗಿನ […]

DAKSHINA KANNADA HOME LATEST NEWS

ಪೆಹಲ್ಗಾಮ್ ದುಷ್ಕೃತ್ಯ: ಬಿಷಪ್‌ ಖಂಡನೆ

ಮಂಗಳೂರು: ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ. ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678