Tag: ಉಜಿರೆ

DAKSHINA KANNADA HOME LATEST NEWS

ರಸ್ತೆ ಡಿವೈಡರ್‌ಗೆ ಬೈಕ್ ಢಿಕ್ಕಿ: 19ರ ಯುವಕ ಸಾವು-ಮತ್ತೋರ್ವ ಗಂಭೀರ

ಬೆಳ್ತಂಗಡಿ: ಸವಾರನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಮಾರ್ಚ್ 28ರ ತಡರಾತ್ರಿ ಸಂಭವಿಸಿದೆ. ಲಾಯಿಲ ಗ್ರಾಮದ ಅಮ್ಮಣ್ಣಂಗಡಿ ನಿವಾಸಿ ಚಂದ್ರಶೇಖರ್ ಅವರ ಪುತ್ರ ನಿತೇಶ್ (19) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಬೈಕ್ ಚಲಾಯಿಸುತ್ತಿದ್ದ ಪುತ್ತೂರು ನಿವಾಸಿ ಲಿಖಿತ್ (20) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರೂ ಉಜಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಎಂದು […]

DAKSHINA KANNADA HOME LATEST NEWS

ಉಜಿರೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ಇಬ್ಬರ ಬಂಧನ

ಉಜಿರೆ: ವೇಶ್ಯಾವಾಟಿಕೆ ಚಟುವಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಹಿನ್ನೆಲೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಖಾಸಗಿ ವಸತಿಗೃಹಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಉಜಿರೆಯ ಬಸ್‌ನಿಲ್ದಾಣದ ಬಳಿ ಇರುವ ಶ್ರೀದುರ್ಗಾ ವಸತಿಗೃಹದಲ್ಲಿ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ವಸತಿಗೃಹದ ಮ್ಯಾನೇಜರ್ ಸತೀಶ್ ಪೂಜಾರಿ ಮತ್ತು ಕನ್ಯಾಡಿ ನಿವಾಸಿ ಯೋಗೀಶ್ ಆಚಾರ್ಯ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. […]