ಭಾರೀ ಮಳೆ: ನಾಳೆ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜೂ.12ರಂದು) ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಗುರುವಾರದಿಂದ ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ […]