Tag: ಎಸ್‌ಡಿಪಿಐ

HOME NATIONAL

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]

DAKSHINA KANNADA HOME LATEST NEWS

ಫೇಸ್‌ಬುಕ್‌ನಲ್ಲಿ ಕೋಮುದ್ವೇಷ & ಸುಳ್ಳು ಸುದ್ದಿ ಪ್ರಸಾರ: SDPI ಅಧ್ಯಕ್ಷನ ಮೇಲೆ FIR

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮುದ್ವೇಷ ಹಾಗೂ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪಕ್ಷದ ಅಧ್ಯಕ್ಷನ ಮೇಲೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ವಿವರ ಜು. 14 ರಂದು ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಧ್ಯಕ್ಷ ಆಶ್ರಪ್ ಬಾವು ಎಂಬಾತ ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ […]

DAKSHINA KANNADA HOME LATEST NEWS

“ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ” ವಕ್ಫ್‌ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ SDPI ಬೃಹತ್‌ ಪ್ರತಿಭಟನೆ

ಮಂಗಳೂರು: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಎಸ್‌ಡಿಪಿಐ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಮಂಗಳೂರಿನ ಕ್ಲಾಕ್‌ ಟವರ್‌ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, “ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡೆಯುವವರೆಗೂ ಹೋರಾಟ ಮುಂದುವರಿಯುತ್ತದೆ. ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಐದು ತಿಂಗಳುಗಳಲ್ಲಿ ನಾಲ್ಕು ಪ್ರತಿಭಟನೆ ನಡೆಸಲಾಗಿದೆ. ಎಸ್‌ಡಿಪಿಐ, ಜಾತ್ಯತೀತ ಸಂಘಟನೆಗಳಿಗೆ ಆಕ್ಷೇಪ ವ್ಯಕ್ತಪಡಿಸಲು […]