DAKSHINA KANNADA
*ಏ.4ಕ್ಕೆ ಗುರುಪುರ ಮೂಳೂರು- ಅಡ್ಡೂರು ಜೋಡುಕರೆ ಕಂಬಳ ಇನಾಯತ್ ಅಲಿ*
ಮಂಗಳೂರು: ಗುರುಪುರದ ಮಾಣಿಬೆಟ್ಟುವಿನಲ್ಲಿ ಏ.4ರ ಶನಿವಾರದಂದು 3ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ, ಕಂಬಳ ಅನ್ನುವಂತಹುದು ಕೇವಲ ಒಂದು ಕ್ರೀಡೆಯಲ್ಲ, ಇದು ಈ ನೆಲೆದ ಸಂಸ್ಕೃತಿ, ಅಸ್ಮಿತೆಯಾಗಿದೆ. ಗುರುಪುರ ಕಂಬಳೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಆಚರಿಸುವ ಮೂಲಕ ನಮ್ಮ ಪರಂಪರೆಯನ್ನು ಮುಂದಿನ […]


