Tag: *ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ*

DAKSHINA KANNADA HOME

*ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ*

ಮಂಗಳೂರು: ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ ಪುತ್ತೂರು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 1ರಲ್ಲಿ 2.91ಕೋಟಿ ರೂ. ವೆಚ್ಚದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ. ಪ್ರಸ್ತುತ ಈ ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಕೇವಲ 531 ಚ. ಮೀಟರ್ ಉದ್ದದ ಶೆಲ್ಟರ್ ಇದೆ. […]