LATEST NEWS
ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್ ಶಿಲ್ಪ ಶಿಬಿರ ಆರಂಭ
ಮಂಗಳೂರು, ಜೂನ್. 13 : ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಬೆಂಗಳೂರು ಹಾಗೂ ಮಾಂಡ್ ಸೊಭಾಣ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಗರದ ಕಲಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ 15 ದಿನಗಳ ಸಿಮೆಂಟ್ ಶಿಲ್ಪಗಳ ರಚನಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾದ ಎಂ. ಸಿ. ರಮೇಶ್ ಅವರು, “ಇಂದಿನ ದಿನಗಳಲ್ಲಿ ಕೈ ಕಸುಬುಗಳು ನಶಿಸುತ್ತಿವೆ ಮತ್ತು ಕಲಾಶಾಲೆಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಲಾವಿದರಿಗೆ ನೆರವಾಗಲು ಅಕಾಡೆಮಿ ಹಲವು ಉತ್ತಮ ಅವಕಾಶಗಳನ್ನು ನೀಡುತ್ತಿದೆ,” ಎಂದರು. […]


