Tag: ಕಾಂಗ್ರೆಸ್‌

HOME

ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ: ಕಾಂಗ್ರೆಸ್ಸಿಗರ ಮೇಲೆ ಶಾಸಕ ಸುನೀಲ್‌ ಗರಂ

ಮಂಗಳೂರು: ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ ನಡೆದಿದೆ ಎಂಬ ಬಗ್ಗೆ ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಅವರು ಆರೋಪಿಸಿದ್ದು, ಇದಕ್ಕೆಲ್ಲಾ ಸ್ಥಳೀಯ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿಯವರ ದ್ವೇಷ ಹಾಗೂ ಅಸೂಯೆಯ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ ಅವರು, ಕಾರ್ಕಳದ ಪ್ರವಾಸೋದ್ಯಮಕ್ಕೆ ಕೊಳ್ಳಿ ಇಟ್ಟ ಕಾಂಗ್ರೆಸ್ ನಾಯಕರನ್ನು ಇತಿಹಾಸ ಕ್ಷಮಿಸದು ಎಂದೂ ಆರೋಪಿಸಿದ್ದಾರೆ. ಏನಿದೆ ಅವರ ಪೋಸ್ಟ್‌ನಲ್ಲಿ ಥೀಂ ಪಾರ್ಕ್ ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು […]

HOME LATEST NEWS STATE

ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ- ಬಜರಂಗದಳದ ಐವರ ಬಂಧನ

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಬಂಧಿತರನ್ನು […]

DAKSHINA KANNADA

“ಬಿಜೆಪಿ ಸುಳ್ಳುನ್ನು ಸತ್ಯವೆಂದು ಬಿಂಬಿಸಿ ಅಪನಂಬಿಕೆ ಸೃಷ್ಟಿಸಿದೆ”

ಮಂಗಳೂರು: 13 ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳ ಕುರಿತು ಕೆಪಿಸಿಸಿ ಉಪಾಧ್ಯಕ್ಷ, ದ.ಕ.ಜಿಲ್ಲಾ ಕೆಪಿಸಿಸಿ ಉಸ್ತುವಾರಿ ಎಂ.ಸಿ ವೇಣುಗೋಪಾಲ್ ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಿರಿಯ ನಾಯಕರು, ವಿವಿಧ ಪದಾಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಸದಾ ಅಶಾಂತಿಗೆ ಪ್ರೇರಣೆ ನೀಡುತ್ತಾ ಬಂದಿದ್ದು, ಸುಳ್ಳುನ್ನು ಸತ್ಯವೆಂದು ಬಿಂಬಿಸಿ ಜನರಲ್ಲಿ ಅಪನಂಬಿಕೆ ಸೃಷ್ಟಿಸಿದೆ. ದ.ಕ. ಜಿಲ್ಲೆ ಶಾಂತಿ ಸೌಹಾರ್ದತೆಯ ಜಿಲ್ಲೆಯಾಗಿದ್ದು, ಶಿಕ್ಷಣ, ವೈದ್ಯಕೀಯ ಮತ್ತು ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವಿಶ್ವವಿಖ್ಯಾತಿ ಪಡೆದಿದೆ. […]

DAKSHINA KANNADA HOME LATEST NEWS

“ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ನೀಡಿದ್ದಾರೆ”

ಮಂಗಳೂರು: ‘ ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ಕೊಡುವ ಹಾಗೂ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಮಾತುಗಳನ್ನು ಆಡಿದ್ದಾರೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಆರ್‌.ಪೂಜಾರಿ ಆರೋಪಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಯ್ಯದ್ ನಾಸಿರ್ ಹುಸೇನ್ ನೇತೃತ್ವದ ಕೆಪಿಸಿಸಿ ನಿಯೋಗವು ಜಿಲ್ಲೆಯ ಅಧಿಕಾರಿಗಳನ್ನು, ಧಾರ್ಮಿಕ ಮುಖಂಡರನ್ನು, ಸಂಘ ಸಂಸ್ಥೆಗಳನ್ನು, ಕಾರ್ಮಿಕ ವರ್ಗದವರನ್ನು ಭೇಟಿ ಮಾಡಿ  ಸೌಹಾರ್ದ ಮೂಡಿಸುವ ಕ್ರಮಗಳ ಬಗ್ಗೆ ಚರ್ಚಿಸಿದರು.‌ ಜಿಲ್ಲಾಧಿಕಾರಿ, ಪೊಲೀಸ್‌ ಕಮಿಷನರ್, ಜಿಲ್ಲಾ ಪೊಲೀಸ್‌ […]