ಕರಾವಳಿಯಾದ್ಯಂತ ಕ್ರೈಸ್ತರಿಂದ ‘ಗರಿಗಳ ಭಾನುವಾರ’ ಆಚರಣೆ
ಮಂಗಳೂರು: ಇಂದು ಗರಿಗಳ ಭಾನುವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಭಾನುವಾರ ಆರಂಭಗೊಂಡಿದೆ. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಏ.13 (ಇಂದು) ಕ್ರೈಸ್ತರು ಭಾನುವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರದ ಮಿಲಾಗ್ರಿಸ್ ಚರ್ಚ್‌ನಲ್ಲಿ ನಡೆದ ಮೆರವಣಿಗೆ ಯೇಸು ಕ್ರಿಸ್ತರು […]