ಪುತ್ತೂರು: ಕೋರ್ಟ್ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಿಡುಗಡೆಗೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ 2018ರಲ್ಲಿ ನಡೆದ ಪ್ರಕರಣವೊಂದರಲ್ಲಿ ಈತನ ಬಂಧನವಾಗಿತ್ತು ಬಳಿಕ ಜಾಮೀನು ಪಡೆದು, ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ […]