ಭಾರೀ ಮಳೆ ಹಿನ್ನೆಲೆ: ಜುಲೈ 23 ರಂದು ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ತುರ್ತು ಆದೇಶಗಳನ್ನು ಹೊರಡಿಸಿದೆ. ಮುಖ್ಯ ಆದೇಶಗಳು ಮತ್ತು ಮಾರ್ಗಸೂಚಿಗಳು ಈ ಕೆಳಗಿನಂತಿವೆ: 12ನೇ ತರಗತಿಯವರೆಗೆ ಕಡ್ಡಾಯ ರಜೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು […]










