ಪುತ್ತೂರು: ಪ್ರೀತಿಸಿ ವಂಚನೆಗೈದು ನಾಪತ್ತೆಯಾಗಿದ್ದ ಕೃಷ್ಣ ರಾವ್ ಅರೆಸ್ಟ್
ಪುತ್ತೂರು: ಯುವತಿಯೊಬ್ಬಳನ್ನು ಪ್ರೀತಿಸಿ ವಂಚನೆ ಮಾಡಿ, ಮಗುವಿನ ಜನನಕ್ಕೆ ಕಾರಣವಾಗಿದ್ದಲ್ಲದೇ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿ ಕೃಷ್ಣ ರಾವ್‌ನನ್ನು ಮೈಸೂರಿನ ಟೀನರಸೀಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಗರ್ಭಿಣಿಯಾದ ಬಳಿಕ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಆತ ಕೈಕೊಟ್ಟಿದ್ದರಿಂದ ಕಂಗಾಲಾದ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆತ ಬಂಧನದ ಭಯದಿಂದ ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರಿನಲ್ಲಿ ವಶಕ್ಕೆ […]










