ಗಣಿ ಗುತ್ತಿಗೆ ನವೀಕರಣ : ಗೊಂದಲ ಸೃಷ್ಟಿಸುವ ಯತ್ನ-ಸಿಎಂ
ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳಲ್ಲಿ ಪ್ರಕಟಗೊಂಡ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಪತ್ರಿಕಾ ಹೇಳಿಕೆ ವಿವರ ಹೀಗಿದೆ. 2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್-1957 […]