Tag: ಕೆನರಾಟಿವಿ ನ್ಯೂಸ್‌

HOME LATEST NEWS

ಅಡಿಕೆ ಬೆಳೆಗಾರರ ಹಿತಾಸಕ್ತಿ ರಕ್ಷಣೆಗೆ ಮಹತ್ವದ ಹೆಜ್ಜೆ – ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ ಮಾಡಿದ ಸಂಸದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ನಿಯೋಗ

ನವದೆಹಲಿ : ದಕ್ಷಿಣ ಭಾರತದ ಲಕ್ಷಾಂತರ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ನವದೆಹಲಿಯಲ್ಲಿ ಮಹತ್ವದ ಸಭೆಯಲ್ಲಿ ಭಾಗವಹಿಸಿ ಅಡಿಕೆ ಬೆಳೆಗಾರರ ಪರವಾಗಿ ಬಲವಾದ ಧ್ವನಿಯನ್ನು ಎತ್ತಿದರು. ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಹಾಗೂ ಶಿವಮೊಗ್ಗ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾದ ಅಡಿಕೆ ಸಹಕಾರಿ ನಿಯೋಗದಲ್ಲಿ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿದರು. […]

DAKSHINA KANNADA LATEST NEWS

ಪೆರುವಾಯಿ ಗ್ರಾಮ ಪಂಚಾಯತ್: ಕೋರಂ ಕೊರತೆಯಿಂದ ಪ್ರಥಮ ಸುತ್ತಿನ ಗ್ರಾಮ ಸಭೆ ರದ್ದು; ಸಾರ್ವಜನಿಕರ ಆಕ್ರೋಶ

ವಿಟ್ಲ, ಪೆರುವಾಯಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜುಲೈ 6, ಸೋಮವಾರ ನಡೆಯಬೇಕಿದ್ದ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕೋರಂ (ಕನಿಷ್ಠ ಸಾರ್ವಜನಿಕರ ಹಾಜರಾತಿ) ಕೊರತೆಯಿಂದಾಗಿ ರದ್ದಾಗಿದೆ. ಅಧಿಕಾರಿಗಳ ವಿಳಂಬ ಪ್ರವೃತ್ತಿ ಮತ್ತು ಸಭೆ ರದ್ದತಿಯಿಂದಾಗಿ ಸಭೆಗೆ ಆಗಮಿಸಿದ್ದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೂರ್ವಾಹ್ನ 11:00 ಗಂಟೆಗೆ ಆರಂಭವಾಗಬೇಕಿದ್ದ ಸಭೆಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಲಿಲ್ಲ. ತಡವಾಗಿ ಬಂದ ಅಧಿಕಾರಿಗಳು ನಾಡಗೀತೆಯೊಂದಿಗೆ ಸಭೆ ಆರಂಭಿಸಲು ಮುಂದಾದರು. ಆದರೆ, ನಿಯಮಾನುಸಾರ ಗ್ರಾಮ ಸಭೆಗೆ ಇರಬೇಕಾದ ಕನಿಷ್ಠ […]

LATEST NEWS

ನಿರಂಜನ್ ರೈ ಮಠಂತಬೆಟ್ಟು ನಿಧನ ಶಾಸಕ ಅಶೋಕ್ ರೈ ಸಂತಾಪ

ಪುತ್ತೂರು: ತನ್ನ ಒಡನಾಡಿಯೂ,ಆತ್ಮೀಯರೂ ಆಗಿದ್ದ ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರಾದ ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಆಶೋಕ್ ರೈ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಟಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ,ಜಿಲ್ಲಾ ಕಂಬಳ ಸಮಿತಿ ಉಪಾಧ್ಯಕ್ಷರಾಗಿ, ಕಂಬಳದ ವೀಕ್ಷಕ ವಿವರಣೆ ಹಾಗೂ ತೀರ್ಪುಗಾರರಾಗಿ ಅಪಾರ ಸೇವೆ ಸಲ್ಲಿಸಿದ್ದ ಮೃತರು ಮೃದು ಸ್ವಭಾವನ ಸಜ್ಜನ ವ್ಯಕ್ತಿಯೂ ಆಗಿದ್ದರು. ಮೃತರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಶಾಸಕರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ […]

HOME LATEST NEWS

ಪುತ್ತೂರಿನ ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ತೀವ್ರ ಸಂತಾಪ

ಪುತ್ತೂರು: ಜುಲೈ ,08 : ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರು ಹಾಗೂ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿರಂಜನ್ ರೈ ಮಠಂತಬೆಟ್ಟು ಅವರ ಆಕಸ್ಮಿಕ ಹೃದಯಾಘಾತದ ನಿಧನಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ನಿವಾಸಕ್ಕೆ ಭೇಟಿ ನೀಡಿದ ರಮಾನಾಥ ರೈ ಅವರು, ನಿರಂಜನ ರೈ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಅವರ ಕುಟುಂಬದ […]

HOME LATEST NEWS

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜನನ-ಮರಣ ಪ್ರಮಾಣಪತ್ರ ವಿತರಣೆ ಸ್ಥಗಿತ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಮಂಗಳೂರು, ಜುಲೈ . 08: ಮಂಗಳೂರು ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಎಸ್‌ಐಆರ್ ಕರ್ತವ್ಯಕ್ಕೆ ನೇಮಿಸಿ, ಮುಂದಿನ ಒಂದು ತಿಂಗಳ ಕಾಲ ಜನನ ಮತ್ತು ಮರಣಗಳ ನೋಂದಣಿ ಘಟಕದಲ್ಲಿ ಅರ್ಜಿ ಸ್ವೀಕಾರವನ್ನು ಬಂದ್ ಮಾಡಿರುವುದಾಗಿ ಬೋರ್ಡ್ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಪಾಲಿಕೆಯ ನಡೆ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಇಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ […]

DAKSHINA KANNADA HOME LATEST NEWS

ದ.ಕ. ಜಿಲ್ಲೆಯಲ್ಲಿ ಜು. 8ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಸುರಕ್ಷತೆಗಾಗಿ ತುರ್ತು ಆದೇಶಗಳನ್ನು ಹೊರಡಿಸಿದೆ. 12ನೇ ತರಗತಿವರೆಗೆ ರಜೆ ಘೋಷಣೆ:ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ […]

DAKSHINA KANNADA HOME LATEST NEWS

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22ಕೋಟಿ ರೂ ವಿಶೇಷ ಅನುದಾನ ಮಂಜೂರು: ಸಂಸದ ಕ್ಯಾ.ಬ್ರಿಜೇಶ್‌ ಚೌಟ

ಮಂಗಳೂರು,: ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರವು 49.22 ಕೋಟಿ ರೂ.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ನವದೆಹಲಿಯಲ್ಲಿ ಸಚಿವಾಲಯದ […]

LATEST NEWS

*ರೈತರಿಂದಲೇ ಮುಂಗಾರು ಬೆಳೆ ಸಮೀಕ್ಷೆ*

ಮಂಗಳೂರು: 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ತಾವೇ ಖುದ್ದಾಗಿ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ. ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಆಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಇಲಾಖೆಯ ಫ್ರೂಟ್ಸ್ (FRUITS) ತಂತ್ರಾಂಶದ ಎಫ್.ಐ.ಡಿ (FID) ಸಂಖ್ಯೆ ಮತ್ತು ಆಧಾರ್ ಇ-ಕೆವೈಸಿ (OTP) ಬಳಸಿ ಮೊಬೈಲ್‌ನಲ್ಲಿ ಲಾಗಿನ್ ಆಗಬೇಕು. ನಂತರ ತಮ್ಮ […]

HOME LATEST NEWS STATE

ಗಿರೀಶ್ ಭಾರದ್ವಾಜ್ ನಿಧನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ

ಬೆಂಗಳೂರು: ‘ತೂಗುಸೇತುವೆಗಳ ಸರದಾರ’, ‘ಸುಳ್ಯದ ವಿಶ್ವೇಶ್ವರಯ್ಯ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಕಳವಳ ಮತ್ತು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮುಖ್ಯಮಂತ್ರಿಯವರು, “ಡಾ. ಗಿರೀಶ್ ಭಾರದ್ವಾಜ್ ಅವರ ಅಗಲಿಕೆಯಿಂದ ರಾಜ್ಯವು ಅಪರೂಪದ ತಾಂತ್ರಿಕ ಸಾಧಕನೊಬ್ಬನನ್ನು ಕಳೆದುಕೊಂಡಂತಾಗಿದೆ. ದೇಶದಾದ್ಯಂತ 140ಕ್ಕೂ ಹೆಚ್ಚು ತೂಗುಸೇತುವೆ ಗಳನ್ನು ನಿರ್ಮಿಸಿದ್ದ ಅವರು, ಕಡಿದಾದ ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಮೂಲಕ ಜನರ ಬದುಕನ್ನು […]

HOME LATEST NEWS

ನಮ್ಮ ಕುಡ್ಲ ‘ನೃತ್ಯ ಭಜನೆ ಸೀಸನ್ 4’: ಉಜಿರೆ ಶ್ರೀ ಜನಾರ್ದನ ಸ್ವಾಮಿ ಭಜನಾ ಮಂಡಳಿಗೆ ಪ್ರಥಮ ಬಹುಮಾನ

ಮಂಗಳೂರು: ನಮ್ಮ ಕುಡ್ಲ ವಾಹಿನಿಯ ವತಿಯಿಂದ ನೃತ್ಯ ಭಜನಾ ಸ್ಪರ್ಧೆಯ ಸೀಸನ್‌ -4 ಜುಲೈ 5 ರಂದು ಭಾನುವಾರ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಿತು. ದೀಪಕ್ಕೆ ಎಣ್ಣೆ ಎರೆದು, ದೀಪ ಬೆಳಗಿಸುವ ಮೂಲಕ ಮಾಣಿಲ ಶ್ರೀ ಧಾಮದ ಮೋಹನದಾಸ ಪರಮ ಹಂಸ ಸ್ವಾಮೀಜಿ ಮತ್ತು ಒಡಿಯೂರು ಕ್ಷೇತ್ರದ ಸಾಧ್ವಿ ಶ್ರೀ ಮಾತಾನಂದಮಯಿ ಹಾಗೂ ಗಣ್ಯರು ಸ್ಪರ್ಧೆಗೆ ಚಾಲನೆ ನೀಡಿದರು. ಬಳಿಕ ಆಶೀರ್ವಾದ ನೀಡಿದ ಮಾಣಿಲಶ್ರೀಗಳು, ಹರಿನಾಮ ಸಂಕೀರ್ತನೆಯಿಂದ ಜಗತ್ತಿಗೆ ವಿಶ್ವಶಾಂತಿ ಕರುಣಿಸಲಿ. ಚೆನ್ನಾಗಿ ಮಳೆ […]