ಮೈಸೂರು: ಡೋರ್ನಹಳ್ಳಿ ಸಂತ ಅಂತೋಣಿಯ ವಾರ್ಷಿಕ ಮಹೋತ್ಸವ ಸಂಪನ್ನ
ಮೈಸೂರು: ಕ್ರೈಸ್ತ ಸಮುದಾಯದ ವಿಶ್ವ ವಿಖ್ಯಾತ ಪವಾಡ ಪುರುಷ ಡೋರ್ನಹಳ್ಳಿ ಸಂತ ಅಂತೋಣಿಯ ವಾರ್ಷಿಕ ಮಹೋತ್ಸವ ಜೂ.13ರಂದು ನಡೆಯಿತು. ಜೂ.4 ರಂದು ಸಂಜೆ 5:30ಕ್ಕೆ ಧ್ವಜಾರೋಹಣದ ಮೂಲಕ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಮೈಸೂರು: ಕ್ರೈಸ್ತ ಸಮುದಾಯದ ವಿಶ್ವ ವಿಖ್ಯಾತ ಪವಾಡ ಪುರುಷ ಡೋರ್ನಹಳ್ಳಿ ಸಂತ ಅಂತೋಣಿಯ ವಾರ್ಷಿಕ ಮಹೋತ್ಸವ ಜೂ.13ರಂದು ನಡೆಯಿತು. ಜೂ.4 ರಂದು ಸಂಜೆ 5:30ಕ್ಕೆ ಧ್ವಜಾರೋಹಣದ ಮೂಲಕ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಉಡುಪಿ : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ […]
ಮಂಗಳೂರು: ಗುಜರಾತಿನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಅಪಾರ ಸಾವು ನೋವು ಸಂಭವಿಸಿದ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಅವರು ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಮೃತ ಪಟ್ಟವರ ಆತ್ಮಗಳಿಗೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಮಂಗಳೂರು: ರೈತರು ಹಾಗೂ ಉತ್ಪಾದಕರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ನಾನಾ ಮೇಳಗಳು ಮತ್ತು ವಸ್ತು ಪ್ರದರ್ಶನಗಳನ್ನು ಆಯೋಜಿಸುತ್ತಾ ಬಂದಿದೆ. ಕಳೆದ ದಶಕದಿಂದ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳವನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದ್ದು, ಸಾರ್ವಜನಿಕರಿಂದ ವಿಶಿಷ್ಟ ಮೆಚ್ಚುಗೆಗಳನ್ನು ಗಳಿಸಿದೆ. ಈ ಬಾರಿ ಹಣ್ಣುಗಳ ಮೇಳವನ್ನು ಜೂನ್ 14 ಮತ್ತು 15 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ ಸಂಕೀರ್ಣ, ಡಾ. ಶಿವರಾಮ ಕಾರಂತ […]
ಅಹಮದಾಬಾದ್: ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದ ವಿಮಾನ ಈ ದುರಂತರದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿತ್ತು. ಈ ದುರಂತವು ಮಧ್ಯಾಹ್ನ 1:30ರ ವೇಳೆಗೆ ಸಂಭವಿಸಿದೆ. ಈ ವೇಳೆ ಕೆಲವರು ಊಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅಲ್ಲಿದ್ದ ಆಹಾರ, ಪಾತ್ರೆಗಳು ಚೆಲ್ಲಾಪಿಲ್ಲಿಯಾಗಿದ್ದು, ಕಾಲೇಜು ಕಟ್ಟಡ ಧ್ವಂಸವಾಗಿದೆ. ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ […]
ಮಂಗಳೂರು: ಸುಹಾಸ್ ಶೆಟ್ಟಿ ಮನೆಯವರು ಕರೆದರೆ ಅವರ ಮನೆಗೂ ಹೋಗುತ್ತೇನೆ ಹಾಗೂ ಅಬ್ದುಲ್ ರೆಹಮಾನ್ ಕೊಲೆ ತನಿಖೆಯನ್ನು ಎನ್‌ಐಗೆ ವಹಿಸುವಂತೆ ಆತನ ಮನೆಯವರು ಕೇಳಿದರೆ ರಾಜ್ಯ ಸರ್ಕಾರ ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಪವಿತ್ರ ಹಜ್ ಯಾತ್ರೆಯಿಂದ ಮರಳಿದ ನಂತರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ನಗರದ ಸೌರ್ಕ್ಯೂಟ್ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಮನೆಯವರು ಕೊಲೆಯಾದ ದಿನವೇ ನನಗೆ ದೂರವಾಣಿ ಮೂಲಕ ಮಾಹಿತಿ […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಕೆಲವು ಘಟನೆಗಳು ಎಲ್ಲರನ್ನೂ ನೋಯಿಸಿವೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಆತಂಕವು ನಮ್ಮನ್ನು ಆಂತರಿಕವಾಗಿ ತೀವ್ರವಾಗಿ ತೊಂದರೆಗೊಳಿಸಿದ್ದು, ಆತಂಕಕ್ಕೆ ಕಾರಣವಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿನ ಜನರ ಪರಸ್ಪರ ನಂಬಿಕೆ ಮತ್ತು ಒಗ್ಗಟ್ಟಿನ ಮೇಲೆ ನಿರ್ಮಿಸಲ್ಪಟ್ಟಿದೆ. ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು – ಎಲ್ಲರೂ ತಲೆಮಾರುಗಳಿಂದ ಪ್ರೀತಿ ಮತ್ತು ನಂಬಿಕೆಯೊಂದಿಗೆ ಹೇಗೆ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂಬುದು ಇಲ್ಲಿದೆ. […]
ಮಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪರಿಶಿಷ್ಟರ ಮೀಸಲು ಭೂಮಿಯಾಗಿರುವ ಡಿ. ಸಿ ಮನ್ನಾ ಭೂಮಿಯ ಮಂಜೂರಾತಿಗೆ ಸಂಬಂಧಿಸಿದ ನ್ಯೂನತೆಗಳನ್ನು ಸರಿಪಡಿಸುವ ಬಗ್ಗೆ ನಿನ್ನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರವರು ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ನಾಯಕರು ಮತ್ತು ದಲಿತ ಸಂಘಟನೆಗಳ ಮುಖಂಡರ ಜೊತೆ ಸುಧೀರ್ಘ ಚರ್ಚೆಯನ್ನು ನಡೆಸಿದರು. ಬ್ರಿಟೀಷರು ಭಾರತಕ್ಕೆ ಬಂದಾಗ ಇಲ್ಲಿನ ಪರಿಶಿಷ್ಟರ ಸ್ಥಿತಿಗತಿಯನ್ನು ಆಧ್ಯಯನ ಮಾಡಿ 100 ವರ್ಷದ ಹಿಂದೆಯೇ ಭೂಮಿಯನ್ನು ಪರಿಶಿಷ್ಟರಿಗಾಗಿ ಮೀಸಲಿಟ್ಟಿದ್ದರು, […]
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ರಾತ್ರಿ […]
ಬೆಂಗಳೂರು: ಚುನಾವಣೆ ವೇಳೆ ಮಾಡಿದ್ದ ವಿವಾದಾತ್ಮಕ ಭಾಷಣ ಸಂಬಂಧ ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಬಂಟ್ವಾಳ ಠಾಣಾ ಪೊಲೀಸರು ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. 2018ರ ವಿಧಾನಸಭಾ ಚುನಾವಣೆ ವೇಳೆ ಬಂಟ್ವಾಳದ ಕಲಡ್ಕದಲ್ಲಿ ರಾಜೇಶ್ ನಾಯ್ಕ್ ಪರ ಚುನಾವಣಾ ಪ್ರಚಾರ ನಡೆಸುವ ಸಂದರ್ಭದಲ್ಲಿ ಸುನಿಲ್ ಕುಮಾರ್, ‘ರಾಮ ಬೇಕೋ, ಅಲ್ಲಾ ಬೇಕೋ? ಎಂದು ಪ್ರಶ್ನೆ ಮಾಡಿದ್ದರು. ಈ ಕುರಿತು ಎಫ್‌ಐಆರ್ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಬಂಟ್ವಾಳ […]