ನಾಳೆಯಿಂದ ಪಿಲಿಕುಳದಲ್ಲಿ ಹಣ್ಣುಗಳ ಮೇಳ
ಮಂಗಳೂರು: ರೈತರು ಹಾಗೂ ಉತ್ಪಾದಕರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ನಾನಾ ಮೇಳಗಳು ಮತ್ತು ವಸ್ತು ಪ್ರದರ್ಶನಗಳನ್ನು ಆಯೋಜಿಸುತ್ತಾ ಬಂದಿದೆ. ಕಳೆದ ದಶಕದಿಂದ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳವನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದ್ದು, ಸಾರ್ವಜನಿಕರಿಂದ ವಿಶಿಷ್ಟ ಮೆಚ್ಚುಗೆಗಳನ್ನು ಗಳಿಸಿದೆ. ಈ ಬಾರಿ ಹಣ್ಣುಗಳ ಮೇಳವನ್ನು ಜೂನ್ 14 ಮತ್ತು 15 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ ಸಂಕೀರ್ಣ, ಡಾ. ಶಿವರಾಮ ಕಾರಂತ […]