Tag: ಕೆನರಾಟಿವಿ ನ್ಯೂಸ್‌

LATEST NEWS

ಪ್ರತಿಮ ಕುಮಾರ್ ಕೆ.ಎಸ್. ಅವರಿಗೆ ಅಮೆರಿಕಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ

ಮಂಗಳೂರು: ಸಮಾಜ ಸೇವಾ ಕ್ಷೇತ್ರದಲ್ಲಿ ಅವರು ಮಾಡಿರುವ ಗಣನೀಯ ಮತ್ತು ನಿಸ್ವಾರ್ಥ ಸಾಧನೆಯನ್ನು ಗುರುತಿಸಿ, ಮಂಗಳೂರಿನ ಪ್ರಮುಖ ಸಾಮಾಜಿಕ ಮತ್ತು ಶೈಕ್ಷಣಿಕ ಮುಖಂಡರಾದ ಶ್ರೀ ಪ್ರತಿಮ ಕುಮಾರ್ ಕೆ. ಎಸ್. ಅವರಿಗೆ ಜಾಗತಿಕ ಮಟ್ಟದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಪಾಂಡಿಚೇರಿಯಲ್ಲಿ ಶನಿವಾರ ನಡೆದ ಪ್ರತಿಷ್ಠಿತ ಸಮಾರಂಭದಲ್ಲಿ ಜಾಗತಿಕ ಮಟ್ಟದ ಯುನೈಟೆಡ್ ಅಮೆರಿಕಾ ಯೂನಿವರ್ಸಿಟಿಯು ಈ ಅತ್ಯುನ್ನತ ಗೌರವ ಡಾಕ್ಟರೇಟ್ ಅನ್ನು ನೀಡಿ ಗೌರವಿಸಿದೆ ಶ್ರೀ ಪ್ರತಿಮ ಕುಮಾರ್ ಕೆ.ಎಸ್. ಅವರು ಭಾರತ್ ಸ್ಕೌಟ್ ಮತ್ತು […]

LATEST NEWS

ಬೋಳೂರು ಜಾರಂದಾಯ ದೈವಸ್ಥಾನ ಪರಿಸರದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ: ಕುಡ್ಸೆಂಪ್ ಎಂಡಿ ಭೇಟಿಯಾದ ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ನಗರದ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಆಸುಪಾಸಿನ ಪರಿಸರದಲ್ಲಿ ಸ್ಥಳೀಯರ ಪ್ರಮುಖ ಸಮಸ್ಯೆಯಾಗಿರುವ ಒಳಚರಂಡಿ (ಡ್ರೈನೇಜ್) ವ್ಯವಸ್ಥೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲಾಧಿಕಾರಿ ದರ್ಶನ್ ಅವರ ಸಮ್ಮುಖದಲ್ಲಿ ಕುಡ್ಸೆಂಪ್ (KUIDFC) ವ್ಯವಸ್ಥಾಪಕ ನಿರ್ದೇಶಕರಾದ ಭೂಬಾಲನ್ ಟಿ. ಅವರನ್ನು ಖುದ್ದಾಗಿ ಭೇಟಿ ಮಾಡಿದ ಶಾಸಕರು, ಯೋಜನೆಗೆ ಅಗತ್ಯ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು ಕಳೆದ 75 ವರ್ಷಗಳಿಂದಲೂ ಈ ಭಾಗದಲ್ಲಿ ಸರಿಯಾದ ಡ್ರೈನೇಜ್ […]

LATEST NEWS

ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜು ಅಧೀನಕ್ಕೊಳಪಡಿಸಿ: ಸಚಿವ ಯು.ಟಿ. ಖಾದರ್‌ಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆಯನ್ನು ಪುತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀನಕ್ಕೊಳಪಡಿಸುವಂತೆ ಶಾಸಕ ಅಶೋಕ್‌ರೈ ಅವರು ರಾಜ್ಯ ಆರೋಗ್ಯ ಸಚಿವ ಯು ಟಿ ಖಾದರ್ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಯಾದ ಶಾಸಕರು ಈಗಾಗಲೇ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ೨೦೨೭ ರಲ್ಲಿಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ವಾಗಲಿದ್ದು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣವಾಗುತತಿರುವ ಹಂತದಲ್ಲೇ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರವೇಶಾತಿಯೂ […]

LATEST NEWS

119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಯಶಸ್ವಿ: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಅತ್ಯಗತ್ಯ – ಪುಷ್ಪರಾಜ್ ಬಿ.ಎನ್

ಮಂಗಳೂರು: ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ಅಭಿರುಚಿಯನ್ನು ಬೆಳೆಸಿಕೊಳ್ಳಲು ಓದುವ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದು ಅತ್ಯಂತ ಪೂರಕ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ತಿಳಿಸಿದ್ದಾರೆ. ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ ಜೂನ್ 27ರ ಶನಿವಾರದಂದು ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸಾಹಿತ್ಯದ […]

LATEST NEWS

ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ NOC ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಮನವಿ.

ಬೆಂಗಳೂರು: ಕೋಳಿ ಸಾಕಾಣಿಕೆ ಫಾರಂ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಗೊಂದಲಗಳನ್ನು ನಿವಾರಿಸುವಂತೆ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರನ್ನು ಖುದ್ದಾಗಿ ಭೇಟಿಯಾಗಿ ಅವರು ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಗ್ರಾಮೀಣ ಭಾಗದ ಅನೇಕ ರೈತರು ಮತ್ತು ಯುವಕರು ಸ್ವ ಉದ್ಯೋಗ ಹಾಗೂ ಕೃಷಿ ಆಧಾರಿತ ಆದಾಯ ವೃದ್ಧಿಗಾಗಿ […]

LATEST NEWS

ಪ್ರಕೃತಿಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಚಂಚಲ ತೇಜೋಮಯ

ಮಂಗಳೂರು: ಪ್ರಕೃತಿಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ಮಾನವನ ಆದ್ಯ ಕರ್ತವ್ಯವಾಗಿದೆ ಎಂದು ಯಶಸ್ವಿನಿ ಮಹಿಳಾ ಮಂಡಳಿಯ ಸ್ಥಾಪಕಾಧ್ಯಕ್ಷರು ಹಾಗೂ ಶ್ರೇಷ್ಠ ಸಹಕಾರಿ ಪುರಸ್ಕೃತರಾದ ಶ್ರೀಮತಿ ಚಂಚಲ ತೇಜೋಮಯ ತಿಳಿಸಿದ್ದಾರೆ. ಯಶಸ್ವಿನಿ ಮಹಿಳಾ ಮಂಡಲದ ವತಿಯಿಂದ ಉರ್ವ ಸ್ಟೋರ್ ಸುತ್ತಮುತ್ತ ಗಿಡಗಳನ್ನು ನೆಡುವ ಹಾಗೂ ಸಾರ್ವಜನಿಕರಿಗೆ ಗಿಡಗಳನ್ನು ಹಂಚುವ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತದನಂತರ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ‘ವನಿತಾಂಗಣ’ದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಕಲ ಜೀವರಾಶಿಗಳಿಗೂ ನೀರು […]

HOME LATEST NEWS

ಸ್ಮಾರ್ಟ್ ಸಿಟಿಗೆ ಕಂಟಕವಾದ ಕೇಬಲ್ ಜಾಲ: ಮಂಗಳೂರಿನ ಪಾದಚಾರಿ ರಸ್ತೆಗಳಲ್ಲಿ ಸಾರ್ವಜನಿಕರ ಜೀವಕ್ಕೆ ಆಪತ್ತು!

ಮಂಗಳೂರು: ಶಿಕ್ಷಣ, ವೈದ್ಯಕೀಯ, ಧಾರ್ಮಿಕ ಕ್ಷೇತ್ರ, ಉದ್ಯಮ ಹಾಗೂ ಪ್ರವಾಸೋದ್ಯಮಕ್ಕೆ ಜಗತ್ತಿನಾದ್ಯಂತ ಹೆಸರಾಗಿರುವ ಕರಾವಳಿಯ ಹೆಮ್ಮೆಯ ನಗರಿ ಮಂಗಳೂರು. ಸದ್ಯ ‘ಸ್ಮಾರ್ಟ್ ಸಿಟಿ’ಯಾಗಿ ರೂಪುಗೊಳ್ಳುತ್ತಿರುವ ಈ ಸುಂದರ ನಗರದ ಸೌಂದರ್ಯಕ್ಕೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಕೆಲವು ಖಾಸಗಿ ಕಂಪನಿಗಳ ಬೇಜವಾಬ್ದಾರಿತನ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ದೊಡ್ಡ ಕಂಟಕವಾಗಿ ಪರಿಣಮಿಸಿದೆ.ನಗರದ ಹಲವು ಪ್ರಮುಖ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿ (Footpaths) ಎಗ್ಗಿಲ್ಲದೆ ನೇತಾಡುತ್ತಿರುವ ವಿವಿಧ ಕಂಪನಿಗಳ ಇಂಟರ್ನೆಟ್ ಹಾಗೂ ಟೆಲಿಕಾಂ ಕೇಬಲ್‌ಗಳು ಸಾರ್ವಜನಿಕರ ಪಾಲಿಗೆ ಸಾವಿನ ಬಲೆಯಾಗಿ ಮಾರ್ಪಟ್ಟಿವೆ.ಗಿಡ-ಮರಗಳ […]

HOME LATEST NEWS

ನಾಗುರಿ ಗೋಡೆ ಕುಸಿತ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ, ತಕ್ಷಣದ ಪುನರ್ವಸತಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ದುರಂತದಿಂದ ಬದುಕುಳಿದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಲಕೃಷ್ಣ ಮತ್ತು ಮಕ್ಕಳಾದ ಅಲ್ಕಾ ಹಾಗೂ ಅನುಷಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು. ರಾಜ್ಯ ಸರ್ಕಾರಕ್ಕೆ […]

LATEST NEWS

*ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ* – *ಸುಧೀರ್ ಕುಮಾರ್ ರೆಡ್ಡಿ*

ಮಂಗಳೂರು,ಜು.1; ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು. ಅವರು ಬುಧವಾರ ಪತ್ರಿಕಾಭವನದಲ್ಲಿದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಡಳಿತ ವ್ಯವಸ್ಥೆ ಹಾಗೂ ಮಾಧ್ಯಮ ಒಂದೇ ಹಾದಿಯಲ್ಲಿ ಸಾಗುತ್ತಿದ್ದು, ಇದು ಅರೋಗ್ಯಕರ ಬೆಳವಣಿಗೆ. ಒಂದೇ ಘಟನೆಯನ್ನು ಹಲವು ರೀತಿಯಲ್ಲಿ ವೈಭವೀಕರಣ ಮಾಡಲಾ […]

LATEST NEWS

ಜೆಡಿಎಸ್ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ; ಮಹಿಳಾ ಸಂಘಟನೆ ಬಲಪಡಿಸಲು ಕರೆ

ಮಂಗಳೂರು : ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಸಂಘಟನಾ ಸಭೆಯು ಮಂಗಳವಾರ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಪಕ್ಷದ ತಳಮಟ್ಟದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಪ್ರಮುಖ ಚರ್ಚೆಗಳು ನಡೆದವು. ಗ್ರಾಮ ಮಟ್ಟದಿಂದ ಪಕ್ಷ ಬಲಪಡಿಸಲು ಕರೆ: ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ […]